ಮಾಜಿ ಸಚಿವ ಎಚ್.ಡಿ. ರೇವಣ್ಣ ಬೆಂಗಾವಲು ವಾಹನದ ನಾಲ್ಕು ಸಿಬ್ಬಂದಿಗೆ ಕೊರೋನಾ ಸೋಂಕು!
ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರ ಬೆಂಗಾವಲು ವಾಹನದಲ್ಲಿ ಇರುವ ನಾಲ್ವರು ಪೊಲೀಸರಿಗೆ ಕೊರೊನಾ ಪಾಸಿಟಿವ್ ದೃಢವಾಗಿದೆ.

ಹಾಸನ: ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರ ಬೆಂಗಾವಲು ವಾಹನದಲ್ಲಿ ಇರುವ ನಾಲ್ವರು ಪೊಲೀಸರಿಗೆ ಕೊರೊನಾ ಪಾಸಿಟಿವ್ ದೃಢವಾಗಿದೆ.
ರೇವಣ್ಣ ಅವರ ಇಬ್ಬರು ಆಪ್ತ ಸಹಾಯಕರು ಸೇರಿ ಒಟ್ಟು ಒಂಬತ್ತು ಜನರ ಸ್ಯಾಂಪಲ್ ಪಡೆದು ಪರೀಕ್ಷೆ ನಡೆಸಲಾಗಿತ್ತು. ಎಸ್ಕಾರ್ಟ್ ವಾಹನದಲ್ಲಿ ಕಾರ್ಯನಿರ್ವಹಿಸುವ ನಾಲ್ವರು ಸಿಬ್ಬಂದಿಗಳ ಪೈಕಿ ಬೆಂಗಳೂರಿನ ಮೂವರು ಹಾಗೂ ಹಾಸನದ ಒಬ್ಬ ಸಿಬ್ಬಂದಿಗೆ ಸೋಂಕು ದೃಢಪಟ್ಟಿದೆ.
ಹೀಗಾಗಿ ಸದ್ಯ ಬೆಂಗಳೂರಿನಲ್ಲಿರುವ ರೇವಣ್ಣರಿಗೂ ಸೋಂಕು ಭೀತಿ ತಟ್ಟಿದೆ. ರೇವಣ್ಣ ಅವರಿಗೂ ಸೋಂಕು ಪರೀಕ್ಷೆ ಮಾಡಿಸುವಂತೆ ವೈದ್ಯರು ಸಲಹೆ ನೀಡಿದ್ದಾರೆ ಎನ್ನಲಾಗಿದೆ. ರಾಜ್ಯದ್ಯಂತ ಮಾರಕ ಕೊರೊನಾ ಸೋಂಕು ವ್ಯಾಪಕವಾಗಿ ಹಬ್ಬುತ್ತಿದ್ದು, ಸೋಂಕು ನಿಯಂತ್ರಣ ಸವಾಲಾಗಿ ಪರಿಣಮಿಸಿದೆ. ಹಾಸನದಲ್ಲಿ ಕಳೆದ ಒಂದು ವಾರದಿಂದ ಕೊರೋನಾ ಸೋಂಕಿನ ಪ್ರಮಾಣ ಏರುತ್ತಲೇ ಇದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


