ಮೈಸೂರು: ಇಬ್ಬರು ಅಕ್ರಮ ಬಾಂಗ್ಲಾ ನಿವಾಸಿಗಳ ಸೆರೆ
ಕಳೆದೊಂದು ವರ್ಷಗಲಿಂದಲೂ ವೀಸಾ, ಪಾಸ್ ಪೋರ್ಟ್ ಇಲ್ಲದೆ ಅಕ್ರಮವಾಗಿ ವಾಸವಿದ್ದ ಬಾಂಗ್ಲಾ ದೇಶದ ಇಬ್ಬರು ಪ್ರಜೆಗಳನ್ನು ಮೈಸೂರಿನ ನಂಜನಗೂಡು ಗ್ರಾಮಾಂತರ ಠಾಣೆ ಪೊಲೀಸರು ಬಂಧನಕ್ಕೊಳಪಡಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ನಂಜನಗೂಡು: ಕಳೆದೊಂದು ವರ್ಷಗಲಿಂದಲೂ ವೀಸಾ, ಪಾಸ್ ಪೋರ್ಟ್ ಇಲ್ಲದೆ ಅಕ್ರಮವಾಗಿ ವಾಸವಿದ್ದ ಬಾಂಗ್ಲಾ ದೇಶದ ಇಬ್ಬರು ಪ್ರಜೆಗಳನ್ನು ಮೈಸೂರಿನ ನಂಜನಗೂಡು ಗ್ರಾಮಾಂತರ ಠಾಣೆ ಪೊಲೀಸರು ಬಂಧನಕ್ಕೊಳಪಡಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಬಾಂಗ್ಲಾದೇಶದ ಸಾತ್ ಕಿರ ಜಿಲ್ಲೆ ಸಾಮ್ ನಗರದ ಶಿರ್ ಗುಲ್ ಘಾಟ್ ನಿವಾಸಿಗಳಾದ ಮೊಹಮ್ಮದ್ ಅಬ್ದುಲ್ಲಾ (27), ಮೊಹಮ್ಮದ್ ಹಬೀಬುಲ್ಲಾ (23) ಬಂಧಿತ ವ್ಯಕ್ತಿಗಳಾಗಿದ್ದಾರೆ.
ಈ ಇಬ್ಬರೂ ನಂಜನಗೂಡು ತಾಲೂಕಿನ ಇಮ್ಮಾವು ಗ್ರಾಮದಲ್ಲಿದ್ದುಕೊಂಡು, ತಾಂಡ್ಯದ ರಿಷಿ ಫ್ಯಾಬ್ರಿಕಾ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಅನುಮಾನಗೊಂಡ ಪೊಲೀಸರು ದಾಖಲಾತಿ ಪರಿಶೀಲನೆ ನಡೆಸಿದಾಗ ಪಾಸ್ ರೋರ್ಟ್, ವೀಸಾ ಇರದಿರುವುದು ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ಬಂಧಿಸಿದ್ದಾರೆ. ಬಳಿಕ ನ್ಯಾಯಾಲಯ ಅವರನ್ನು ನ್ಯಾಯಾಂಗ ವಶಕ್ಕೆ ನೀಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


