ಗಂಗಾವತಿ: ನಿಷೇಧಾಜ್ಞೆ ಮಧ್ಯೆ ಅಕ್ರಮ ರೆಸಾರ್ಟ್ ತೆರವು ಕಾರ್ಯಚರಣೆ
ಸುಪ್ರಿಂ ಕೋರ್ಟ್ ನಿರ್ದೇಶನದ ಮೆರೆಗೆ ತಾಲ್ಲೂಕಿನ ವಿರುಪಾಪುರ ಗಡ್ಡೆಯಲ್ಲಿನ ಅನಧಿಕೃತ ರೆಸಾರ್ಟ್ ತೆರವು ಕಾರ್ಯಚರಣೆ ಇಂದು ಬೆಳ್ಳಂಬೆಳಗ್ಗೆ ಆರಂಭವಾಯಿತು.

ಗಂಗಾವತಿ: ಸುಪ್ರಿಂ ಕೋರ್ಟ್ ನಿರ್ದೇಶನದ ಮೆರೆಗೆ ತಾಲ್ಲೂಕಿನ ವಿರುಪಾಪುರ ಗಡ್ಡೆಯಲ್ಲಿನ ಅನಧಿಕೃತ ರೆಸಾರ್ಟ್ ತೆರವು ಕಾರ್ಯಚರಣೆ ಇಂದು ಬೆಳ್ಳಂಬೆಳಗ್ಗೆ ಆರಂಭವಾಯಿತು.
ಸುಮಾರು 200ಕ್ಕೂ ಹೆಚ್ಚು ಪೊಲೀಸರ ಸರ್ಪಗಾವಲಿನಲ್ಲಿ ತಹಸೀಲ್ದಾರ್ ಎಲ್.ಡಿ. ಚಂದ್ರಕಾಂತ್ ನೇತೃತ್ವದಲ್ಲಿ ತೆರವು ಕಾರ್ಯಚರಣೆ ಆರಂಭವಾಯಿತು. ಬೆಳಗ್ಗೆ ಮೂರು ಗಂಟೆಯಿಂದಲೇ ಕಂದಾಯ, ಪೊಲೀಸ್, ಹಂಪಿ ಅಭಿವೃದ್ಧಿ ಪ್ರಾಧಿಕಾರ ಸೇರಿದಂತೆ ನಾನಾ ಇಲಾಖೆಗಳ ಸಿಬ್ಬಂದಿ ಗಡ್ಡಿಗೆ ಆಗಮಿಸಿದರು.
ಎಲ್ಲಾ ಸಿದ್ಧತೆಗಳನ್ನು ಮಾಡಿಕೊಂಡು ಬೆಳಗ್ಗೆ ಏಳು ಗಂಟೆಯಿಂದಲೇ ತೆರವು ಕಾರ್ಯಚರಣೆ ಆರಂಭವಾಯಿತು. ಮೇಲು ಉಸ್ತುವಾರಿ ವಹಿಸಿಕೊಂಡಿದ್ದ ಜಿಲ್ಲಾಧಿಕಾರಿ ಸುನಿಲ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಅಧೀನ ಅಧಿಕಾರಿಗಳಿಗೆ ಡಿಸಿ ನಿರ್ದೇಶನ ನೀಡಿದರು. ಮೂರು ದಿನಕಾಲ ತೆರವು ಕಾರ್ಯಚರಣೆ ಮುಂದುವರೆಯಲಿದೆ. ಆದರೆ ಸುಪ್ರಿಂ ಕೋರ್ಟ್ ಜ.24ರಂದು ಮಾಡಿದ್ದ ಆದೇಶದ ಹಿನ್ನೆಲೆ ಈಗಾಗಲೆ ಗಡ್ಡಿಯಲ್ಲಿ ಶೇ.40ರಷ್ಟು ಹೊಟೇಲ್ ಮಾಲಿಕರು ಸ್ವಯಂ ಪ್ರೇರಣೆಯಿಂದ ತೆರವು ಮಾಡಿಕೊಂಡಿದ್ದರು. ಇನ್ನುಳಿದ ಹೊಟೇಲ್ ಗಳ ತೆರವು ನಡೆಯಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


