ಸಿಇಟಿ; ಆನ್ ಲೈನ್ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
ವಿವಿಧ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕಾಗಿ ನಡೆಸುವ ಸಿಇಟಿ-2020ಕ್ಕೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಇದೇ ತಿಂಗಳ 7ರಿಂದ 16ರವರೆಗೆ ಅವಧಿ ವಿಸ್ತರಿಸಲಾಗಿದೆ.

ಬೆಂಗಳೂರು: ವಿವಿಧ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕಾಗಿ ನಡೆಸುವ ಸಿಇಟಿ-2020ಕ್ಕೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಇದೇ ತಿಂಗಳ 7ರಿಂದ 16ರವರೆಗೆ ಅವಧಿ ವಿಸ್ತರಿಸಲಾಗಿದೆ.
ವಿವಿಧ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕಾಗಿ ಅರ್ಜಿ ಸಲ್ಲಿಸಲು ನಿನ್ನೆಯವರೆಗೆ ಆರಂಭದಲ್ಲಿ ಅವಕಾಶ ನೀಡಲಾಗಿತ್ತು. ಅನೇಕ ವಿದ್ಯಾರ್ಥಿಗಳು ಹಾಗೂ ಪೋಷಕರು ಅರ್ಜಿ ಸಲ್ಲಿಸಲು ಅವಕಾಶ ವಿಸ್ತರಿಸಿ ಎಂದು ಕೋರಿರುವುದರಿಂದ ಎರಡನೇ ಬಾರಿಗೆ ಪರೀಕ್ಷಾ ಪ್ರಾಧಿಕಾರವು ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸಿದೆ.
ಇಲ್ಲಿಯವರೆಗೆ ಸಿಇಟಿ 2020ಕ್ಕೆ ಅರ್ಜಿ ಸಲ್ಲಿಸದೇ ಇರುವ ವಿದ್ಯಾರ್ಥಿಗಳು ಈ ತಿಂಗಳ 16ರವರೆಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


