ಬೈಕ್ ಮುಖಾಮುಖಿ ಡಿಕ್ಕಿ: ಇಬ್ಬರು ಸಾವು
ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಇಬ್ಬರು ಮೃತಪಟ್ಟಿರುವ ಘಟನೆ ಜಿಲ್ಲೆಯ ಎಚ್.ಡಿ.ಕೋಟೆ ತಾಲ್ಲೂಕಿನ ಭೀಮನಹಳ್ಳಿ ಸಮೀಪ ಗುರುವಾರ ರಾತ್ರಿ ಸಂಭವಿಸಿದೆ.

ಮೈಸೂರು: ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಇಬ್ಬರು ಮೃತಪಟ್ಟಿರುವ ಘಟನೆ ಜಿಲ್ಲೆಯ ಎಚ್.ಡಿ.ಕೋಟೆ ತಾಲ್ಲೂಕಿನ ಭೀಮನಹಳ್ಳಿ ಸಮೀಪ ಗುರುವಾರ ರಾತ್ರಿ ಸಂಭವಿಸಿದೆ.
ಹಾಸನದ ಕಾಂತರಾಜು (25) ಹಾಗೂ ಕೇರಳದ ಉಬೈದ್ (24) ಸ್ಥಳದಲ್ಲೇ ಮೃತಪಟ್ಟ ಬೈಕ್ ಸವಾರರು. ಇನ್ನು ಘಟನೆಯಲ್ಲಿ ಕಾಂತರಾಜು ಅವರೊಂದಿಗೆ ಬೈಕ್‌ನಲ್ಲಿ ಬರುತ್ತಿದ್ದ ಹಾಸನದ ದಿವಾಕರ (25) ಎಂಬುವವರು ಗಾಯಗೊಂಡಿದ್ದು, ಹುಣಸೂರು ಆಸ್ಪತ್ರೆಗೆ ದಾಖಲಿಸಿಲಾಗಿದೆ.
ಕಾಂತರಾಜು ಮತ್ತು ದಿವಾಕರ ಜೆಸಿಬಿ ಚಾಲಕರಾಗಿದ್ದು, ಉಬೈದ್ ಶುಂಠಿ ಬೆಳೆಗಾರರಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಎಚ್ ಡಿ ಕೋಟೆ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಎಚ್.ಡಿ.ಕೋಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


