ಗೃಹ ಸಚಿವರಿಗೆ ಪತ್ರ ಬರೆದು ಅಸಮಾಧಾನ ಹೊರಹಾಕಿದ ತನ್ವೀರ್ ಸೇಠ್
ತನ್ನ ಮೇಲೆ ನಡೆದಿದ್ದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ತನ್ವೀರ್ ಸೇಠ್ ಬಿಜೆಪಿ ಸರ್ಕಾರದ ವಿರುದ್ಧ ಬಹಿರಂಗವಾಗಿ ಅಸಮಾಧಾನ ಹೊರಹಾಕಿದ್ದಾರೆ.

ಬೆಂಗಳೂರು: ತನ್ನ ಮೇಲೆ ನಡೆದಿದ್ದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ತನ್ವೀರ್ ಸೇಠ್ ಬಿಜೆಪಿ ಸರ್ಕಾರದ ವಿರುದ್ಧ ಬಹಿರಂಗವಾಗಿ ಅಸಮಾಧಾನ ಹೊರಹಾಕಿದ್ದಾರೆ.
ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿರುವ ಅವರು, ಈ ಹಲ್ಲೆ ಪ್ರಕರಣದ ಹಿಂದೆ ಯಾರಿದ್ದಾರೆ ಎಂಬುದನ್ನು ಪತ್ತೆ ಹಚ್ಚಿ, ನನಗೆ ನ್ಯಾಯ ಒದಗಿಸಿ ಎಂದು ಮನವಿ ಮಾಡಿದ್ದಾರೆ.
ಇತ್ತೀಚೆಗೆ ಅವರ ಮೇಲೆ ನಡೆದ ಹಲ್ಲೆ ವಿಚಾರವಾಗಿ ಗೃಹ ಸಚಿವರಿಗೆ ಪತ್ರ ಬರೆದ ತನ್ವೀರ್ ಸೇಠ್, ನನ್ನ ಮೇಲೆ ಹಲ್ಲೆ ಮಾಡಿದ ವ್ಯಕ್ತಿಯನ್ನ ಮಾತ್ರ ಪೊಲೀಸರು ಬಂಧಿಸಿದ್ದಾರೆ.
ಆದರೆ ಈ ಪ್ರಕರಣದ ಹಿಂದೆ ಯಾರು ಇದ್ದಾರೆ ಅನ್ನೋದು ಪತ್ತೆ ಹಚ್ಚುವಲ್ಲಿ ಪೊಲೀಸರು ವಿಫಲರಾಗಿದ್ದಾರೆ ಎಂದು ದೂರಿದ್ದಾರೆ.
ಕಳೆದ ವರ್ಷದ ನವೆಂಬರ್ 18ರಂದು ರಾತ್ರಿ 11 ಗಂಟೆ ಸುಮಾರಿನಲ್ಲಿ ಮೈಸೂರಿನ ಬನ್ನಿಮಂಟಪದಲ್ಲಿ ನೂರಾರು ಜನರ ಮುಂದೆಯೇ ಶಾಸಕರ ಮೇಲೆ ಕೊಲೆ ಯತ್ನ ನಡೆದಿತ್ತು. ಘಟನೆಯಲ್ಲಿ ಕುತ್ತಿಗೆ ಭಾಗಕ್ಕೆ ಮಚ್ಚಿನ ಪೆಟ್ಟು ಬಿದ್ದು ತನ್ವೀರ್ ಸೇಠ್ ಜೀವನ್ಮರಣ ಹೋರಾಟ ಆರಂಭಿಸಿದ್ದರು.
ಹಲ್ಲೆಯ ನಂತರ ಮೈಸೂರಿನಲ್ಲಿ ಚಿಕಿತ್ಸೆ ಪಡೆದಿದ್ದ ಶಾಸಕ ತನ್ವೀರ್ ಸೇಠ್ ಅವರನ್ನು ಹೆಚ್ಚಿನ ಚಿಕಿತ್ಸೆಗೆ ವಿದೇಶಕ್ಕೆ ಕಳುಹಿಸಲಾಗಿತ್ತು. ಚಿಕಿತ್ಸೆ ಸಂಪೂರ್ಣ ಯಶಸ್ವಿಯಾದ ನಂತರ ದುಬೈನಲ್ಲೇ ಅವರು ವಿಶ್ರಾಂತಿ ಪಡೆದಿದ್ದರು. ಬಳಿಕ ಭಾರತಕ್ಕೆ ವಾಪಸ್ ಬಂದಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


