ರಾಜ್ಯ

ಇದೂವರೆಗೂ ರಾಜ್ಯದಲ್ಲಿ ಒಂದೂ ಕೊರೊನಾ ಪಾಸಿಟಿವ್ ಬಂದಿಲ್ಲ, ಆತಂಕ ಬೇಡ: ಸಚಿವ ಡಾ.ಸುಧಾಕರ್

ಇದುವರೆಗೂ ರಾಜ್ಯದಲ್ಲಿ ಎಲ್ಲಿಯೂ ಕೊರೊನಾ ಪಾಸಿಟಿವ್ ಬಂದಿಲ್ಲ ಎಲ್ಲಾ ರಿಪೋರ್ಟ್ ಗಳಲ್ಲೂ ನೆಗೆಟಿವ್ ಅಂತ ವರದಿ ಬಂದಿದ್ದು ರೋಗದ ಲಕ್ಷಣಗಳ ಶಂಕೆ ಹಿನ್ನಲೆಯಲ್ಲಿ ಇಂದು ಮೂವರನ್ನು ಒಳರೋಗಿಗಳಾಗಿ ದಾಖಲಿಸಿ‌ ಚಿಕಿತ್ಸೆ ಕೊಡಲಾಗುತ್ತಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ಮಾಹಿತಿ ನೀಡಿದ್ದಾರೆ.

ಇದೂವರೆಗೂ ರಾಜ್ಯದಲ್ಲಿ ಒಂದೂ ಕೊರೊನಾ ಪಾಸಿಟಿವ್ ಬಂದಿಲ್ಲ, ಆತಂಕ ಬೇಡ: ಸಚಿವ ಡಾ.ಸುಧಾಕರ್
ಸುಧಾಕರ್
Published On :

ಬೆಂಗಳೂರು: ಇದುವರೆಗೂ ರಾಜ್ಯದಲ್ಲಿ ಎಲ್ಲಿಯೂ ಕೊರೊನಾ ಪಾಸಿಟಿವ್ ಬಂದಿಲ್ಲ ಎಲ್ಲಾ ರಿಪೋರ್ಟ್ ಗಳಲ್ಲೂ ನೆಗೆಟಿವ್ ಅಂತ ವರದಿ ಬಂದಿದ್ದು ರೋಗದ ಲಕ್ಷಣಗಳ ಶಂಕೆ ಹಿನ್ನಲೆಯಲ್ಲಿ ಇಂದು ಮೂವರನ್ನು ಒಳರೋಗಿಗಳಾಗಿ ದಾಖಲಿಸಿ‌ ಚಿಕಿತ್ಸೆ ಕೊಡಲಾಗುತ್ತಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ಮಾಹಿತಿ ನೀಡಿದ್ದಾರೆ.

ವಿಧಾನಸೌಧದಲ್ಲಿ ಕೊರೊನಾ ವೈರಾಣು ಹಾವಳಿ ಸಂಬಂಧ ರಾಜ್ಯದ ಸಮಗ್ರ ಮಾಹಿತಿಯನ್ನೊಳಗೊಂಡ‌ ಹೆಲ್ತ್ ಬುಲೆಟಿನ್ ಬಿಡುಗಡೆಗೊಳಿಸಿ ಮಾತನಾಡಿದ ಅವರು,ಇದುವರೆಗೂ ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಬಂದಿಲ್ಲ.

ಆರೋಗ್ಯ ಇಲಾಖೆಯ ಅಧಿಕಾರಿಗಳ ನಿರಂತರ ಶ್ರಮ, ಮುನ್ನೆಚ್ಚರಿಕೆ ಕ್ರಮದಿಂದ ಈ ವೈರಾಣುಗಳನ್ನು ಒಳಗಡೆ ಬಿಡದ ರೀತಿ ಕ್ರಮ ಕೈಗೊಳ್ಳಲಾಗಿದೆ ಈಗಾಗಲೇ ರಾಜ್ಯದಲ್ಲಿ 72,542 ಜನರನ್ನು ತಪಾಸಣೆ ಮಾಡಲಾಗಿದೆ.ಕಳೆದ ಎರಡು ದಿನಗಳಲ್ಲಿ ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 49594 ಪ್ರಯಾಣಿಕರ ತಪಾಸಣೆ ನಡೆಸಲಾಗಿದೆ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.