ವಿನಯ್ ಗುರೂಜಿಗೆ ಬ್ಲಾಕ್ ಮೇಲ್ ಪ್ರಕರಣ: ನಾಲ್ವರು ಸಿಸಿಬಿ ಬಲೆಗೆ
ಅವಧೂತ ವಿನಯ್ ಗುರೂಜಿಗೆ ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ತಂಡವನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ

ಬೆಂಗಳೂರು: ಪತ್ರಕರ್ತರ ಹೆಸರಿನಲ್ಲಿ ಅವಧೂತ ವಿನಯ್ ಗುರೂಜಿಗೆ ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ತಂಡವನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ
ಮುನಿರಾಜು, ಮನೋಜ್, ರವಿಕುಮಾರ್ ಮುರಳಿ, ಮಂಜು ಬಂಧಿತರು .ಬಂಧಿತರು ವಿನಯ್ ಗುರೂಜಿಯ ಭಾಷಣದ ವಿಡಿಯೋ ತುಣುಕಗಳನ್ನು ತಪ್ಪಾಗಿ ಕಾವೇರಿ ಯೂಟ್ಯೂಬ್ ಚಾನೆಲ್ ನಲ್ಲಿ ವೈರಲ್ ಮಾಡುತ್ತಿದ್ದರು.
ಇದನ್ನು ನಿಲ್ಲಿಸಬೇಕಾದರೇ 30 ಲಕ್ಷ ಹಣ ನೀಡಬೇಕೆಂದು ಗ್ಯಾಂಗ್ ನಲ್ಲಿದ್ದ ಮುರುಳಿ, ಗುರೂಜಿ ಅವರ ಜತೆಗಿದ್ದ ಪ್ರಶಾಂತ್ ಎಂಬುವವರಿಗೆ ಬೇಡಿಕೆ ಇಟ್ಟಿದ್ದ ಎನ್ನಲಾಗಿದೆ. ಇದರ ಆಡಿಯೋ ರೆಕಾರ್ಡ್ ಆಗಿತ್ತು. ಆ ಬಗ್ಗೆ ಸಿಸಿಬಿ ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಕಾವೇರಿ ಎಂಬ ಯುಟ್ಯೂಬ್ ಚಾನೆಲ್ ಸೃಷ್ಟಿಸಿ ಅದರ ಹೆಸರಿನಲ್ಲಿ ಕೃತ್ಯ ಎಸಗಿದ್ದರು ಎಂದು ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ತಿಳಿಸಿದ್ದಾರೆ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


