ರಾಜ್ಯ

ಕುಂದಾಪುರ: ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿ ಹೃದಯಾಘಾತದಿಂದ ಸಾವು

ಬೆಂಗಳೂರಿನಿಂಡ ಕುಂದಾಪುರಕ್ಕೆ ಖಾಸಗಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿ ಪ್ರಯಾಣದ ನಡುವೆಯೇ ಹೃದಯಾಘಾತದಿಂದ ಮೃತಪಟ್ಟ ಘಟನೆ ಕುಂದಾಪುರದಲ್ಲಿ ನಡೆದಿದೆ.

ಕುಂದಾಪುರ: ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿ ಹೃದಯಾಘಾತದಿಂದ ಸಾವು
ಸಂಗ್ರಹ ಚಿತ್ರ
Published On :

ಕುಂದಾಪುರ: ಬೆಂಗಳೂರಿನಿಂಡ ಕುಂದಾಪುರಕ್ಕೆ ಖಾಸಗಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿ ಪ್ರಯಾಣದ ನಡುವೆಯೇ ಹೃದಯಾಘಾತದಿಂದ ಮೃತಪಟ್ಟ ಘಟನೆ ಕುಂದಾಪುರದಲ್ಲಿ ನಡೆದಿದೆ.

ಮೃತ ವಿದ್ಯಾರ್ಥಿಯನ್ನು ಬಳ್ಕೂರು ದೇವಸ್ಥಾನ ಬೆಟ್ಟು ನಿವಾಸಿ ಶ್ರೀಧರ ಮೂರ್ತಿ ಅವರ ಪುತ್ರ ಸುಹಾನ್ (22) ಎಂದು ಗುರುತಿಸಲಾಗಿದೆ.

ಸುಹಾನ್ ಬೆಂಗಳೂರು ಕಾಲೇಜಿನಲ್ಲಿ ಕಡೇ ವರ್ಷದ ಎಂಜಿನಿಯರಿಂಗ್ ವಿದ್ಯಾಭ್ಯಾಸ ಮಾಡುತ್ತಿದ್ದ. ಶನಿವಾರ ರಾತ್ರಿ 9.45ಕ್ಕೆ ಊರಿಗೆ ತೆರಳಲು ಬಸ್ಸು ಏರಿದ್ದಾನೆ. ಆದರೆ ಬೆಳಿಗ್ಗೆ 7.30ರ ವೇಳೆಗೆ ಬಸ್ಸು ಕುಂದಾಪುರಕ್ಕೆ ತಲುಪಿದರೂ ಸುಹಾನ್ ಇಳಿದಿರಲಿಲ್ಲ.  ಇದನ್ನು ಕಂಡ ಬಸ್ ನಿರ್ವಾಹಕ ಪರಿಶೀಲಿಸಿದಾಗ ಸುಹಾನ್ ಮೃತಪಟ್ಟಿರುವುದು ತಿಳಿದಿದೆ.

ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ಪರಿಶೀಲನೆ ನಡೆಸಿದ ಕುಂದಾಪುರ ಪೋಲೀಸರು ಸುಹಾನ್ ಹೃದಯಾಘಾತ ಅಥವಾ ಇನ್ನಾವುದೇ ಕಾಯಿಲೆಯಿಂದ ಮೃತಪಟ್ಟಿರಬಹುದು ಎಂದು ಶಂಕಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.