ದಾವಣಗೆರೆ: ಮರಳು ಲಾರಿ ಡಿಕ್ಕಿ: ಶಾಲಾ ಬಾಲಕಿ ಸಾವು
ಮರಳು ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಶಾಲಾ ಬಾಲಕಿಯೋರ್ವಳು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಜಿಲ್ಲೆಯ ನ್ಯಾಮತಿ ತಾಲೂಕಿನ ಮರಿಗೊಂಡನಹಳ್ಳಿ ಗ್ರಾಮದ ಬಳಿ ಸೋಮವಾರ ಬೆಳಗ್ಗೆ ಸಂಭವಿಸಿದೆ.

ದಾವಣಗೆರೆ: ಮರಳು ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಶಾಲಾ ಬಾಲಕಿಯೋರ್ವಳು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಜಿಲ್ಲೆಯ ನ್ಯಾಮತಿ ತಾಲೂಕಿನ ಮರಿಗೊಂಡನಹಳ್ಳಿ ಗ್ರಾಮದ ಬಳಿ ಸೋಮವಾರ ಬೆಳಗ್ಗೆ ಸಂಭವಿಸಿದೆ.
ಮೃತಪಟ್ಟ ಶಾಲಾ ಬಾಲಕಿಯನ್ನು 14 ವರ್ಷದ ದಿವ್ಯಾ ಪಾಟೀಲ್ ಎಂದು ಗುರುತಿಸಲಾಗಿದೆ. ಘಟನೆಯಿಂದ ರೊಚ್ಚಿಗೆದ್ದ ಸ್ಥಳೀಯರು ಮರಳು ಲಾರಿಗೆ ಬೆಂಕಿ ಹಚ್ಚಿ, ಲಾರಿಗಳ ಸಂಚಾರ ನಿರ್ಬಂಧಿಸಬೇಕು ಎಂದು ಆಗ್ರಹಿಸಿ ಧರಣಿ ನಡೆಸಿದರು.
ವಿಷಯ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ನ್ಯಾಮತಿ ಪೊಲೀಸ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.ದಾವಣಗೆರೆ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ ಘಟನಾ ಸ್ಥಳಕ್ಕೆ ಭೇಟಿ ನೀಡಿ, ಸ್ಥಳೀಯರ ಜೊತೆಗೆ ಚರ್ಚಿಸಿ ಬೆಳಗ್ಗೆ ಲಾರಿ ಸಂಚಾರ ನಿಷೇಧಿಸಲು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯ ಟಾಸ್ಕ್‌ಪೋರ್ಸ್ ಸಭೆಯಲ್ಲಿ ಚರ್ಚಿಸಲಾಗುವುದು. ಅಲ್ಲದೇ, ಕಂದಾಯ ಹಾಗೂ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಲಾಗುವುದು ಎಂದರು. ಲಾರಿ ಚಾಲಕನ ಅಜಾಗರೂಕತೆಯಿಂದ ಈ ದುರ್ಘಟನೆ ಸಂಭವಿಸಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


