ರಾಜ್ಯ

ಮಂಗಳೂರು ವೆನ್ಲ್ಯಾಕ್ ಆಸ್ಪತ್ರೆಯಿಂದ ಪರಾರಿಯಾದ ಕೊರೋನಾ ಶಂಕಿತ ಬಂಟ್ವಾಳದಲ್ಲಿ ಪತ್ತೆ!

ಕೊರೋನಾವೈರಸ್ ಶಂಕೆಯಿಂದ ಆಸ್ಪತ್ರೆಗೆ ದಾಖಲಾಗಿದ್ದ ರೋಗಿಯೊಬ್ಬ ಮಂಗಳುರು ವೆನ್ಲಾಕ್ ಆಸ್ಪತ್ರೆಯಿಂದ ಪರಾರಿಯಾಗಿದ್ದು ಸಧ್ಯ ಆತನನ್ನು ಮಾರ್ಚ್ 9, ಸೋಮವಾರ ಪೊಲೀಸರು ಬಂಟ್ವಾಳದಲ್ಲಿ ಪತ್ತೆಹಚ್ಚಿದ್ದಾರೆ.

ಮಂಗಳೂರು ವೆನ್ಲ್ಯಾಕ್ ಆಸ್ಪತ್ರೆಯಿಂದ ಪರಾರಿಯಾದ ಕೊರೋನಾ ಶಂಕಿತ ಬಂಟ್ವಾಳದಲ್ಲಿ ಪತ್ತೆ!
ಮಂಗಳೂರು ವೆನ್ಲ್ಯಾಕ್ ಆಸ್ಪತ್ರೆಯಿಂದ ಪರಾರಿಯಾದ ಕೊರೋನಾ ಶಂಕಿತ ಬಂಟ್ವಾಳದಲ್ಲಿ ಪತ್ತೆ!
Published On :

ಬಂಟ್ವಾಳ: ಕೊರೋನಾವೈರಸ್ ಶಂಕೆಯಿಂದ ಆಸ್ಪತ್ರೆಗೆ ದಾಖಲಾಗಿದ್ದ ರೋಗಿಯೊಬ್ಬ ಮಂಗಳುರು ವೆನ್ಲಾಕ್ ಆಸ್ಪತ್ರೆಯಿಂದ ಪರಾರಿಯಾಗಿದ್ದು ಸಧ್ಯ ಆತನನ್ನು ಮಾರ್ಚ್ 9, ಸೋಮವಾರ ಪೊಲೀಸರು ಬಂಟ್ವಾಳದಲ್ಲಿ ಪತ್ತೆಹಚ್ಚಿದ್ದಾರೆ.

ಆಸ್ಪತ್ರೆಯ ಆರೋಗ್ಯ ಅಧಿಕಾರಿ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದು, ಅದರ ನಂತರ ಕರಾವಳಿ ಜಿಲ್ಲೆಗಳಲ್ಲಿ ಹೆಚ್ಚಿನ ಎಚ್ಚರಿಕೆ  ವಹಿಸಲಾಗಿದೆ.

ಸಧ್ಯ ಆತನನ್ನು ಬಂಟ್ವಾಳದ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಾರ್ಚ್ 8 ರ ಭಾನುವಾರ ದುಬೈನಿಂದ ಮಂಗಳೂರಿಗೆ ವಿಮಾನದಲ್ಲಿ ಬಂದಿದ್ದ ವ್ಯಕ್ತಿ ಕೊರೋನಾವೈರಸ್ ಸೋಂಕಿನ ಲಕ್ಷಣವನ್ನು ಪ್ರದರ್ಶಿಸಿದ್ದ. ಅವರನ್ನು ಇಲ್ಲಿನ ಜಿಲ್ಲಾ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಆತ ಅಲ್ಲಿ ಚಿಕಿತ್ಸೆ ಪಡೆಯಲು ನಿರಾಕರಿಸಿದ್ದಾನೆ. ಹಾಗೂ ಆಸ್ಪತ್ರೆಯಿಂದ ತಪ್ಪಿಸಿಕೊಂಡಿದ್ದ, ಇದು ಜಿಲ್ಲೆಯ ಜನರಲ್ಲಿ ಆತಂಕ ಕವಿಯುವಂತೆ ಮಾಡಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.