ಸಾಂಕ್ರಾಮಿಕ ರೋಗದ ಭೀತಿ: ಹೋಳಿ ಹಬ್ಬದ ಸಮೂಹ ಆಚರಣೆಗಳಿಂದ ದೂರವಿರಲು ಮುಖ್ಯಮಂತ್ರಿ ಸಲಹೆ
ಬಣ್ಣಗಳ ಹಬ್ಬ ಹೋಳಿ ಹಬ್ಬಕ್ಕೆ ಈ ಬಾರಿ ಕೊರೋನಾ ವೈರಸ್'ನ ಕರಿಛಾಯೆ ಬಿದ್ದಿದ್ದು, ಈ ನಡುವಲ್ಲೇ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು, ನಾಡಿನ ಜನತೆಗೆ ಹೋಳಿ ಹಬ್ಬದ ಶುಭಾಶಯ ಕೋರಿದ್ದಾರೆ.

ಬೆಂಗಳೂರು: ಬಣ್ಣಗಳ ಹಬ್ಬ ಹೋಳಿ ಹಬ್ಬಕ್ಕೆ ಈ ಬಾರಿ ಕೊರೋನಾ ವೈರಸ್'ನ ಕರಿಛಾಯೆ ಬಿದ್ದಿದ್ದು, ಈ ನಡುವಲ್ಲೇ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು, ನಾಡಿನ ಜನತೆಗೆ ಹೋಳಿ ಹಬ್ಬದ ಶುಭಾಶಯ ಕೋರಿದ್ದಾರೆ.
ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿ ಜನತೆಗೆ ಶುಭಾಶಯ ಕೋರಿರುವ ಅವರು, ಸಾಂಕ್ರಾಮಿಕ ರೋಗದ ಭೀತಿ ಆವರಿಸಿರುವ ಹಿನ್ನೆಲೆಯಲ್ಲಿ ಸಮೂಹ ಆಚರಣಗಳಿಂದ ದೂರವಿರೋಣ ಎಂದು ಜನತೆಗೆ ಮನವಿ ಮಾಡಿಕೊಂಡಿದ್ದಾರೆ.
ನಾಡಿನ ಸಮಸ್ತ ಜನರಿಗೆ ಹೋಳಿ ಹಬ್ಬದ ಹಾರ್ದಿಕ ಶುಭಾಶಯಗಳು. ಬಣ್ಣದ ಓಕುಳಿಯ ರಂಗು ನಮ್ಮೆಲ್ಲರ ಬಾಳನ್ನು ಅರ್ಥಪೂರ್ಣವಾಗಿ ತುಂಬಲಿ. ಬಣ್ಣ ಮೈಮೇಲಿರುವುದಕ್ಕಿಂತ ಮುಖ್ಯವಾಗಿ ಬದುಕಿನಲ್ಲಿರಲಿ. ಸುರಕ್ಷಿತ ಆಚರಣೆಗೆ ಮಹತ್ವ ಕೊಡೋಣ. ಸಾಂಕ್ರಾಮಿಕ ರೋಗದ ಭೀತಿ ಆವರಿಸಿರುವ ಹಿನ್ನೆಲೆಯಲ್ಲಿ ಸಮೂಹ ಆಚರಣೆಗಳಿಂದ ದೂರವಿರೋಣ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


