ರಾಜ್ಯ

ಕೊನೆಗೂ ಪ್ರತ್ಯಕ್ಷರಾದ ಆರೋಗ್ಯ ಸಚಿವ: ಕೆಐಎಎಲ್'ಗೆ ದಿಢೀರ್ ಭೇಟಿ, ಪರಿಶೀಲನೆ

ಪುತ್ರಿ ವಿವಾಹ ಕಾರ್ಯದಲ್ಲಿ ಕಾರ್ಯಮಗ್ನರಾಗಿದ್ದ ಆರೋಗ್ಯ ಸಚಿವರು ಮತ್ತೆ ತಮ್ಮ ಜವಾಬ್ದಾರಿಯತ್ತ ಮುಖ ಮಾಡಿದ್ದು, ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ದಿಢೀರ್ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆಂದು ಮಂಗಳವಾರ ತಿಳಿದುಬಂದಿದೆ.

ಕೊನೆಗೂ ಪ್ರತ್ಯಕ್ಷರಾದ ಆರೋಗ್ಯ ಸಚಿವ: ಕೆಐಎಎಲ್'ಗೆ ದಿಢೀರ್ ಭೇಟಿ, ಪರಿಶೀಲನೆ
ಕೊನೆಗೂ ಪ್ರತ್ಯಕ್ಷರಾದ ಆರೋಗ್ಯ ಸಚಿವ: ಕೆಐಎಎಲ್'ಗೆ ದಿಢೀರ್ ಭೇಟಿ, ಪರಿಶೀಲನೆ
Published On :

ಬೆಂಗಳೂರು: ಪುತ್ರಿ ವಿವಾಹ ಕಾರ್ಯದಲ್ಲಿ ಕಾರ್ಯಮಗ್ನರಾಗಿದ್ದ ಆರೋಗ್ಯ ಸಚಿವರು ಮತ್ತೆ ತಮ್ಮ ಜವಾಬ್ದಾರಿಯತ್ತ ಮುಖ ಮಾಡಿದ್ದು, ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ದಿಢೀರ್ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆಂದು ಮಂಗಳವಾರ ತಿಳಿದುಬಂದಿದೆ. 

ರಾಜ್ಯದಲ್ಲಿ ಕೊರೋನಾ ಭೀತಿ ಕಾಣಿಸಿಕೊಂಡಿದ್ದು ಜನರು ಆತಂಕಕ್ಕೀಡಾಗಿದ್ದಾರೆ. ವೈರಸ್ ಕುರಿತು ಆರೋಗ್ಯ ಇಲಾಖೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಇದರ ಉಸ್ತುವಾರಿ ನೋಡಿಕೊಳ್ಳಬೇಕಿದ್ದ ಆರೋಗ್ಯ ಸಚಿವರ ಶ್ರೀರಾಮುಲು ಅವರು ಎಲ್ಲಿಯೂ ಕಾಣಿಸಿಕೊಂಡಿರಲಿಲ್ಲ. 

ಈ ನಡುವೆ ಪುತ್ರಿ ವಿವಾಹ ಕಾರ್ಯದಲ್ಲಿ ಕಾರ್ಯಮಗ್ನರಾಗಿದ್ದ ಕಾರಣದಿಂದ ಸಚಿವ ಶ್ರೀರಾಮುಲು ಅವರು ನಾಪತ್ತೆಯಾಗಿದ್ದಾರೆಂದು ವ್ಯಾಪಕ ವಿರೋಧ ಹಾಗೂ ಟೀಕೆಗಳು ವ್ಯಕ್ತವಾಗುತ್ತಿದ್ದವು.

ಇದೀಗ ದಿಢೀರ್ ಪ್ರತ್ಯಕ್ಷವಾಗಿರುವ ಸಚಿವರು, ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬೇಟಿ ನೀಡಿ, ಅಲ್ಲಿನ ವ್ಯವಸ್ಥೆಯನ್ನು ಪರಿಶೀಲನೆ ನಡೆಸಿದ್ದಾರೆ. ವಿಮಾನ ನಿಲ್ದಾಣಕ್ಕೆ ಬರುವ ಪ್ರಯಾಣಿಕರ ತಪಾಸಣೆ ನಡೆಸುವ ಸ್ಥಲಕ್ಕೆ ಭೇಟಿ ನೀಡಿದ ಸಚಿವರು, ಯಾವ ರೀತಿಯ ವ್ಯವಸ್ತೆಯನ್ನು ಕಲ್ಪಿಸಲಾಗಿದೆ ಎಂಬುದರ ಬಗ್ಗೆ ಮಾಹಿತಿ ಪಡೆದುಕೊಂಡರು. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.