ರಾಜ್ಯ

ಸಿಲಿಕಾನ್ ಸಿಟಿಯಲ್ಲಿ ಮತ್ತೆ ಖಾಕಿ ಗನ್ ಸೌಂಡ್: ಸ್ಲಂ‌ ಭರತ್‌ನ ಸಹಚರನ ಕಾಲಿಗೆ ಗುಂಡೇಟು

ಇತ್ತೀಚೆಗಷ್ಟೇ ಎನ್ ಕೌಂಟರ್ ನಲ್ಲಿ ಬಲಿಯಾಗಿದ್ದ ರೌಡಿಶೀಟರ್ ಸ್ಲಂ ಭರತ್ ನ ಸಹಚರನೋರ್ವನ ಮೇಲೆ ಪೊಲೀಸರು‌ ಗುಂಡು ಹಾರಿಸಿ ಬಿಇಎಲ್ ಲೇಔಟ್ ನಲ್ಲಿ ಬಂಧಿಸಿದ್ದಾರೆ.

ಸಿಲಿಕಾನ್ ಸಿಟಿಯಲ್ಲಿ ಮತ್ತೆ ಖಾಕಿ ಗನ್ ಸೌಂಡ್: ಸ್ಲಂ‌ ಭರತ್‌ನ ಸಹಚರನ ಕಾಲಿಗೆ ಗುಂಡೇಟು
ಸಾಂದರ್ಭಿಕ ಚಿತ್ರ
Published On :

ಬೆಂಗಳೂರು: ಇತ್ತೀಚೆಗಷ್ಟೇ ಎನ್ ಕೌಂಟರ್ ನಲ್ಲಿ ಬಲಿಯಾಗಿದ್ದ ರೌಡಿಶೀಟರ್ ಸ್ಲಂ ಭರತ್ ನ ಸಹಚರನೋರ್ವನ ಮೇಲೆ ಪೊಲೀಸರು‌ ಗುಂಡು ಹಾರಿಸಿ ಬಿಇಎಲ್ ಲೇಔಟ್ ನಲ್ಲಿ ಬಂಧಿಸಿದ್ದಾರೆ.

ಸಿದ್ದರಾಜು ಅಲಿಯಾಸ್ ಸಿದ್ಧ ಗುಂಡೇಟು ತಿಂದ ರೌಡಿಶೀಟರ್.ಬಿಇಎಲ್ ಲೇಔಟ್ ಬಳಿ ಸಿದ್ದರಾಜು ಇರುವ ಖಚಿತ ಮಾಹಿತಿ ಮೇರೆಗೆ‌ ಬ್ಯಾಡರ ಹಳ್ಳಿ ಪೊಲೀಸರು ಆತನನ್ನು ಬಂಧಿಸಲು ತೆರಳಿದ್ದರು.

ಆರೋಪಿ ಸಿದ್ದರಾಜು ಗೆ ಪೊಲೀಸರು ಶರಣಾಗುವಂತೆ ಸೂಚಿಸಿದ್ದರು. ಆದರೆ, ಈ ವೇಳೆ ಆತ ಮುಖ್ಯಪೇದೆ ಗುರುದೇವ್ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದಾನೆ. ಹೀಗಾಗಿ ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿ, ಶರಣಾಗುವಂತೆ ಸಿದ್ದರಾಜುಗೆ ಸೂಚಿಸಿದ್ದರು.

ಆದರೆ, ಆತ ಪೊಲೀಸರ ಮಾತಿಗೆ ಕಿವಿಗೊಡದೆ ಪರಾರಿಯಾಗಲು ಯತ್ನಿಸಿದ್ದ ಹಿನ್ನೆಲೆಯಲ್ಲಿ ಆರೋಪಿ ಬಲಗಾಲಿಗೆ ಬ್ಯಾಡರ ಹಳ್ಳಿ ಪೊಲೀಸ್ ಇ‌ನ್ಸ್ ಪೆಕ್ಟರ್ ರಾಜೀವ್, ಗುಂಡು ಹಾರಿಸಿದ್ದಾರೆ. ತಕ್ಷಣ ಕುಸಿದು ಬಿದ್ದ ಆತನನ್ನು ಸುತ್ತುವರಿದ ಪೊಲೀಸರು ಆತನನ್ನು ವಶಕ್ಕೆ ಪಡೆದು ಆಸ್ಪತ್ರೆಗೆ ದಾಖಲಿಸಿದ್ದಾರೆ. 15ಕ್ಕೂ ಹೆಚ್ಚು ಪ್ರಕರಣಗಳಲ್ಲಿ ಸಿದ್ಧ ಬೇಕಾಗಿದ್ದ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ಸದ್ಯ ಮುಖ್ಯ ಪೇದೆ ಗುರುದೇವ್ ಹಾಗೂ ಆರೋಪಿ‌ ಸಿದ್ದರಾಜುಗೆ ಪೊಲೀಸರು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಗೆ ಸಂಬಂಧಿಸಿದಂತೆ ಬ್ಯಾಡರ ಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.