ರಾಜ್ಯ

ಮಂಗಳೂರು: ಬಸ್ಸು ಚಾಲಕ ಸಾವು, ಹೃದಯಾಘಾತ ಶಂಕೆ

ನಿಲ್ಲಿಸಿದ್ದ ಕೆಎಸ್ಆರ್‌ಟಿಸಿ ಬಸ್ಸಿನೊಳಗೆ ಚಾಲಕನ ಮೃತದೇಹ ಪತ್ತೆಯಾಗಿದ್ದು, ಹೃದಯಾಘಾತದಿಂದ ಮೃತಪಟ್ಟಿರಬಹುದು ಎಂದು ಶಂಕಿಸಲಾಗಿದೆ.

ಮಂಗಳೂರು: ಬಸ್ಸು ಚಾಲಕ ಸಾವು, ಹೃದಯಾಘಾತ ಶಂಕೆ
ಕೆಎಸ್ ಆರ್ ಟಿಸಿ (ಸಂಗ್ರಹ ಚಿತ್ರ)
Published On :

ಮಂಗಳೂರು: ನಿಲ್ಲಿಸಿದ್ದ ಕೆಎಸ್ಆರ್‌ಟಿಸಿ ಬಸ್ಸಿನೊಳಗೆ ಚಾಲಕನ ಮೃತದೇಹ ಪತ್ತೆಯಾಗಿದ್ದು, ಹೃದಯಾಘಾತದಿಂದ ಮೃತಪಟ್ಟಿರಬಹುದು ಎಂದು ಶಂಕಿಸಲಾಗಿದೆ.

40 ವರ್ಷದ ಬೀದರ್ ಮೂಲದ ರೇವಣ್ಣಪ್ಪ, ದಕ್ಷಿಣ ಕನ್ನಡ ಜಿಲ್ಲೆಯ ಕಡಬದಲ್ಲಿ ನಿಲ್ಲಿಸಿದ್ದ ಬಸ್ಸಿನಲ್ಲಿ ಮೃತಪಟ್ಟಿದ್ದಾರೆ.

ಮಂಗಳವಾರ ಪುತ್ತೂರಿನಿಂದ ಸಂಜೆ ಕಡಬಕ್ಕೆ ಆಗಮಿಸಿದ ಬಸ್ಸನ್ನು ಕಡಬದ ದುರ್ಗಾಂಬಿಕಾ ಅಮ್ಮನವರ ದೇವಸ್ಥಾನದ ಸಮೀಪ ಹೆದ್ದಾರಿಯ ಪಕ್ಕದಲ್ಲಿ ರಾತ್ರಿ ನಿಲ್ಲಿಸಲಾಗಿತ್ತು. ಬುಧವಾರ ಬೆಳಗ್ಗೆ ಆ ಬಸ್ಸು ಶಾಂತಿಮೊಗರು ಮಾರ್ಗವಾಗಿ ಪುತ್ತೂರಿಗೆ ತೆರಳಬೇಕಿತ್ತು. ಆದರೆ, ಬೆಳಗ್ಗೆ ನಿರ್ವಾಹಕ ಎದ್ದು ಚಾಲಕನನ್ನು ನೋಡಿದಾಗ ಚಾಲಕ ಮುಗ್ಗರಿಸಿ ಕುಳಿತ ಸ್ಥಿತಿಯಲ್ಲಿ ಕಂಡುಬಂದಿದ್ದು, ಹೃದಯಾಘಾತದಿಂದ ಮೃತಪಟ್ಟಿರಬಹುದು ಎಂದು ಶಂಕಿಸಲಾಗಿದೆ. 

ಘಟನೆಗೆ ಸಂಬಂಧಿಸಿದಂತೆ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.