ರಾಜ್ಯ

ಕೊರೊನಾವೈರಸ್ ಭೀತಿ: ಹೆಚ್ಚಿನ ಬೆಲೆಗೆ ಮಾಸ್ಕ್ ಮಾರಾಟ; ಹಲವೆಡೆ ದಾಳಿ

ರಾಜ್ಯದಲ್ಲಿ ಕೋವಿಡ್-19 ಸೋಂಕು ಹರಡದಂತೆ ರಕ್ಷಿಸಿಕೊಳ್ಳಲು ಸಾರ್ವಜನಿಕರು ಮಾಸ್ಕ್ ಬಳಸುತ್ತಿದ್ದು ಮುಖಗವಸುಗಳನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡುವವರ ವಿರುದ್ಧ ಕಠಿಣ ಕ್ರಮ ಜರುಗಿಸಲು ಔಷಧ ನಿಯಂತ್ರಕರಿಗೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸೂಚಿಸಿದ್ದಾರೆ.

ಕೊರೊನಾವೈರಸ್ ಭೀತಿ: ಹೆಚ್ಚಿನ ಬೆಲೆಗೆ ಮಾಸ್ಕ್ ಮಾರಾಟ; ಹಲವೆಡೆ ದಾಳಿ
ಸಂಗ್ರಹ ಚಿತ್ರ
Published On :

ಬೆಂಗಳೂರು: ರಾಜ್ಯದಲ್ಲಿ ಕೋವಿಡ್-19 ಸೋಂಕು ಹರಡದಂತೆ ರಕ್ಷಿಸಿಕೊಳ್ಳಲು ಸಾರ್ವಜನಿಕರು ಮಾಸ್ಕ್ ಬಳಸುತ್ತಿದ್ದು ಮುಖಗವಸುಗಳನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡುವವರ ವಿರುದ್ಧ ಕಠಿಣ ಕ್ರಮ ಜರುಗಿಸಲು ಔಷಧ ನಿಯಂತ್ರಕರಿಗೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸೂಚಿಸಿದ್ದಾರೆ.

ಕರ್ನಾಟಕ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಹಾಯವಾಣಿ ಸಂಖ್ಯೆ: 104ಕ್ಕೆ ಸಾರ್ವಜನಿಕರಿಂದ ಸ್ವೀಕೃತವಾದ ಕರೆಗಳನ್ನು ಆಧರಿಸಿ ಔಷಧ ನಿಯಂತ್ರಣ ಇಲಾಖೆಯ ಅಧಿಕಾರಿಗಳು ಮತ್ತು ಕಾನೂನು ಮಾಪನಶಾಸ್ತ್ರ ಇಲಾಖೆಯ ಅಧಿಕಾರಿಗಳು ಜಂಟಿಯಾಗಿ ದಾಳಿ ನಡೆಸಿರುವುದು ವರದಿಯಾಗಿದೆ.

ಮಾಸ್ಕ್, ಸ್ಯಾನಿಟೈಸರ್ ಹೆಚ್ಚಿನ ಬೆಲೆಗೆ ಮಾರಾಟ ಮಾಡದಂತೆ ಮನವಿ
ವ್ಯಾಪಕವಾಗಿ ಹರಡುತ್ತಿರುವ ಕೊರೊನಾ ಸೋಂಕು ಹರಡದಂತೆ ತಡೆಗಟ್ಟಲು ಜನರು ಮುಖಗವಸು ಬಳಕೆಗೆ ಮುಂದಾಗಿದ್ದು ಮಾಸ್ಕ್, ಸ್ಯಾನಿಟೈಸರ್ ಗಳನ್ನು ನಿಗದಿತ ಬೆಲೆ (ಎಂ ಆರ್ ಪಿ) ಬೆಲೆಯಲ್ಲಿ ಮಾರಾಟ ಮಾಡುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮನವಿ ಮಾಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.