ರಾಜ್ಯ

ಕರ್ನಾಟಕದ ಯಾವ-ಯಾವ ಆಸ್ಪತ್ರೆಗಳಲ್ಲಿ ಕೊರೋನಾ ವೈರಸ್ ಪರೀಕ್ಷೆ ನಡೆಸಲಾಗುತ್ತದೆ ಗೊತ್ತಾ!

ವಿಶ್ವಾದ್ಯಂತ ಮರಣ ಮೃದಂಗ ಭಾರಿಸುತ್ತಿರುವ ಕೊರೋನಾ ವೈರಸ್ ಗೆ ಭಾರತದಲ್ಲಿ ಒಟ್ಟು 73 ಮಂದಿ ತುತ್ತಾಗಿದ್ದಾರೆ. ಆದರೆ ಕೊರೋನಾ ವೈರಸ್ ಗೆ ಎಲ್ಲೆಲ್ಲಿ ಪರೀಕ್ಷೆ ನಡೆಸಲಾಗುತ್ತದೆ ಎಂಬ ಸಣ್ಣ ವರದಿ ಇಲ್ಲಿದೆ.

ಕರ್ನಾಟಕದ ಯಾವ-ಯಾವ ಆಸ್ಪತ್ರೆಗಳಲ್ಲಿ ಕೊರೋನಾ ವೈರಸ್ ಪರೀಕ್ಷೆ ನಡೆಸಲಾಗುತ್ತದೆ ಗೊತ್ತಾ!
ಕೊರೋನಾ ವೈರಸ್
Published On :

ಬೆಂಗಳೂರು: ವಿಶ್ವಾದ್ಯಂತ ಮರಣ ಮೃದಂಗ ಭಾರಿಸುತ್ತಿರುವ ಕೊರೋನಾ ವೈರಸ್ ಗೆ ಭಾರತದಲ್ಲಿ ಒಟ್ಟು 73 ಮಂದಿ ತುತ್ತಾಗಿದ್ದಾರೆ. ಆದರೆ ಕೊರೋನಾ ವೈರಸ್ ಗೆ ಎಲ್ಲೆಲ್ಲಿ ಪರೀಕ್ಷೆ ನಡೆಸಲಾಗುತ್ತದೆ ಎಂಬ ಸಣ್ಣ ವರದಿ ಇಲ್ಲಿದೆ.

ವಿಶ್ವಾದ್ಯಂತ ಕೊರೋನಾ ಮಾರಿಗೆ 4 ಸಾವಿರಕ್ಕೂ ಅಧಿಕ ಮಂದಿ ಬಲಿಯಾಗಿದ್ದು, ಭಾರತದಲ್ಲಿ ಈ ವರೆಗೂ ಮಾರಣಾಂತಿಕ ಸೋಂಕಿಗೆ 73 ಮಂದಿ ಒಳಗಾಗಿದ್ದಾರೆ. ದೇಶದ ಪ್ರತೀ ರಾಜ್ಯದಲ್ಲೂ ಕೊರೋನಾ ಚಿಕಿತ್ಸಾ ವಿಭಾಗ ತೆರೆಯಲಾಗಿದ್ದು, ನಮ್ಮ ಕರ್ನಾಟಕದಲ್ಲಿ ಎಲ್ಲೆಲ್ಲಿ, ಯಾವ ಆಸ್ಪತ್ರೆಗಳಲ್ಲಿ ಮಾರಕ ಕೊರೋನಾ ವೈರಸ್ ಸೋಂಕು ಪರೀಕ್ಷೆ ನಡೆಸಲಾಗುತ್ತದೆ ಎಂಬ ಮಾಹಿತಿ ಇಲ್ಲಿದೆ.

ಮಾರಕ ಕೊರೋನಾಗೆ ಬೆಂಗಳೂರು, ಮೈಸೂರು, ಹಾಸನ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಈ ಕೊರೋನಾ ವೈರಸ್ ಸೋಂಕು ಪತ್ತೆ ಮಾಡಲಾಗುತ್ತದೆ. 

ಬೆಂಗಳೂರಿನ ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ, ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ವೈರಾಲಜಿ ಫೀಲ್ಡ್ ಯುನಿಟ್ ನಲ್ಲಿ ಮತ್ತು ಮೈಸೂರಿನಲ್ಲಿರುವ ಮೈಸೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯಲ್ಲಿ ಕೊರೋನಾ ಸೋಂಕು ಪತ್ತೆ ವಿಭಾಗಗಳಿವೆ. ಇನ್ನು ಹಾಸನದಲ್ಲಿರುವ ಹಾಸನ ವೈದ್ಯಕೀಯ ವಿಜ್ಞಾನ ಸಂಸ್ಥೆ ಮತ್ತು ಶಿವಮೊಗ್ಗದಲ್ಲಿರುವ ಶಿವಮೊಗ್ಗ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ ಆಸ್ಪತ್ರೆಗಳಲ್ಲಿ ಕೊರೋನಾ ವೈರಸ್ ಸೋಂಕು ಪತ್ತೆ ಮಾಡಲಾಗುತ್ತದೆ.

ಇನ್ನು ಬೆಂಗಳೂರಿನಲ್ಲಿರುವ ರಾಜೀವ್ ಗಾಂಧಿ ಎದೆನೋವು ಮತ್ತು ಹೃದ್ರೋಗ ಆಸ್ಪತ್ರೆಯಲ್ಲಿ ಕೊರೋನಾ ವೈರಸ್ ಸೋಂಕು ಪೀಡಿತರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಇದಕ್ಕಾಗಿಯೇ ಪ್ರತ್ಯೇಕ ವಿಭಾಗ ಕೂಡ ತೆರೆಯಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.