ಕೊರೋನಾ ವೈರಸ್ ಹರಡದಂತೆ ತಡೆಯಲು ಮಾಲ್ ಗಳು, ಚಿತ್ರಮಂದಿರ ಮುಚ್ಚಿ: ಸರ್ಕಾರಕ್ಕೆ ಸುಧಾಮೂರ್ತಿ ಒತ್ತಾಯ
ಕೊರೋನಾ ವೈರಸ್ ಹರಡದಂತೆ ತಡೆಯಲು ಶಾಲಾ, ಕಾಲೇಜುಗಳು, ಮಾಲ್ ಗಳು, ಚಿತ್ರಮಂದಿರಗಳು ಹಾಗೂ ಎಲ್ಲಾ ಹವಾನಿಯಂತ್ರಿತ ಜಾಗಗಳನ್ನು ಬಂದ್ ಮಾಡುವಂತೆ ಇನ್ಫೋಸಿಸ್ ಫೌಂಡೇಷನ್ ಮುಖ್ಯಸ್ಥೆ ಸುಧಾ ನಾರಾಯಣಮೂರ್ತಿ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಬೆಂಗಳೂರು: ಕೊರೋನಾ ವೈರಸ್ ಹರಡದಂತೆ ತಡೆಯಲು ಶಾಲಾ, ಕಾಲೇಜುಗಳು, ಮಾಲ್ ಗಳು, ಚಿತ್ರಮಂದಿರಗಳು ಹಾಗೂ ಎಲ್ಲಾ ಹವಾನಿಯಂತ್ರಿತ ಜಾಗಗಳನ್ನು ಬಂದ್ ಮಾಡುವಂತೆ ಇನ್ಫೋಸಿಸ್ ಫೌಂಡೇಷನ್ ಮುಖ್ಯಸ್ಥೆ ಸುಧಾ ನಾರಾಯಣಮೂರ್ತಿ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಕೊರೋನಾ ವೈರಾಣು ಅಧಿಕ ಉಷ್ಣತೆಯಲ್ಲಿ ಸಾವನ್ನಪ್ಪುವುದು ವೈಜ್ಞಾನಿಕವಾಗಿ ಸಾಬೀತು ಆಗಿದೆ. ಇದಕ್ಕೆ ಉದಾಹರಣೆ ಎಂಬಂತೆ ಆಸ್ಟ್ರೇಲಿಯಾದಲ್ಲಿ ಗರಿಷ್ಠ ಬೇಸಿಗೆ ಮತ್ತು ಸಿಂಗಾಪುರದಲ್ಲಿ ಎಲ್ಲಾ 12 ತಿಂಗಳು ಬೇಸಿಗೆ ಇದೆ ಆದಾಗ್ಯೂ, ಗರಿಷ್ಠ ಉಷ್ಣಾಂಶದ ಹೊರತಾಗಿಯೂ ಅಲ್ಲಿಯೂ ಕೂಡಾ ಈ ಸೋಂಕು ಹರಡುತ್ತಿದೆ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಬರೆದಿರುವ ಪತ್ರದಲ್ಲಿ ಸುಧಾಮೂರ್ತಿ ತಿಳಿಸಿದ್ದಾರೆ.
ಪ್ರಸ್ತುತದಲ್ಲಿನ ಪರಿಸ್ಥಿತಿ ಕುರಿತಂತೆ ನಾರಾಯಣ ಹೆಲ್ತ್ ಮುಖ್ಯಸ್ಥ ದೇವಿ ಶೆಟ್ಟಿ ಅವರೊಂದಿಗೆ ಚರ್ಚೆ ನಡೆಸಲಾಗಿದ್ದು, ಕೊರೋನಾ ಸೋಂಕು ತೀವ್ರವಾಗಿ ಹರಡುವ ಮುನ್ನ ನಾವು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕಾಗಿದೆ ಎಂದು ಅವರು ಹೇಳಿದ್ದಾರೆ.
ಒಂದು ವೇಳೆ ಇಂತಹ ಸಾಂಕ್ರಾಮಿಕ ರೋಗಗಳು ಕಾಣಿಸಿಕೊಂಡರೆ ಸರ್ಕಾರಿ ಆಸ್ಪತ್ರೆಗಳನ್ನು ಹೊರತುಪಡಿಸಿ ಖಾಸಗಿ ಆಸ್ಪತ್ರೆಗಳು ನಿರ್ವಹಣೆ ಮಾಡುವುದು ಕಷ್ಟ. ಅದಕ್ಕಾಗಿ ಇದೇ ಉದ್ದೇಶಕ್ಕಾಗಿ ಕನಿಷ್ಠ 500 ರಿಂದ 700 ಹಾಸಿಗೆಗಳ ಸಾಮರ್ಥ್ಯದ ಸರ್ಕಾರಿ ಆಸ್ಪತ್ರೆಯೊಂದನ್ನು ತಮ್ಮಗೆ ನೀಡಿದರೆ ಇನ್ಫೋಸಿಸ್ ಫೌಂಡೇಷನ್ ವತಿಯಿಂದ ಜನರ ಕೆಲಸ ಮಾಡುವುದಾಗಿ ಅವರು ಮನವಿ ಮಾಡಿಕೊಂಡಿದ್ದಾರೆ.
ವೈದ್ಯಕೀಯ ಉಪಕರಣಗಳಂತಹ ಸಂಪನ್ಮೂಲಗಳನ್ನು ಒದಗಿಸಲು ಡಾ. ದೇವಿ ಶೆಟ್ಟಿ ಒಪ್ಪಿಗೆ ನೀಡಿದ್ದು, ಸರ್ಕಾರದೊಂದಿಗೆ ಪೂರ್ವಭಾವಿಯಾಗಿ ಕೆಲಸ ಮಾಡಲು ಬಯಸುತ್ತೇವೆ . ಇದರಿಂದ ನಾವು ಕೊರೋನಾ ವೈರಾಣು ಬೇಗ ಹರಡಂತೆ ತಡೆಯಬಹುದು. ರಾಜ್ಯದ ಹಿತದೃಷ್ಟಿಯಿಂದ ಈ ಕೆಲಸ ಮಾಡುತ್ತಿರುವುದಾಗಿ ಅವರು ತಿಳಿಸಿದ್ದಾರೆ.
ಕಲಬುರಗಿಯಲ್ಲಿ 76 ವರ್ಷದ ವೃದ್ಧರೊಬ್ಬರು ಮಂಗಳವಾರ ರಾತ್ರಿ ಮೃತಪಟ್ಟಿರುವುದು ಸೇರಿದಂತೆ ರಾಜ್ಯದಲ್ಲಿ ಒಟ್ಟಾರೇ ಆರು ಕೊರೋನಾ ವೈರಸ್ ಪ್ರಕರಣಗಳು ದೃಢಪಟ್ಟಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


