ಕಾರಿಗೆ ಕಾರು ಡಿಕ್ಕಿ: ನಾಲ್ವರ ದುರ್ಮರಣ
ಸ್ವಿಫ್ಟ್ ಡಿಸೈರ್ ಕಾರೊಂದು ರಸ್ತೆಯ ಡಿವೈಡರ್ ಹಾರಿ ಮತ್ತೊಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ನಾಲ್ವರು ಮೃತಪಟ್ಟಿರುವ ಘಟನೆ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ ಯಂಟಗಾನಹಳ್ಳಿ ಬಳಿ ಸಂಭವಿಸಿದೆ.

ನೆಲಮಂಗಲ: ಸ್ವಿಫ್ಟ್ ಡಿಸೈರ್ ಕಾರೊಂದು ರಸ್ತೆಯ ಡಿವೈಡರ್ ಹಾರಿ ಮತ್ತೊಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ನಾಲ್ವರು ಮೃತಪಟ್ಟಿರುವ ಘಟನೆ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ ಯಂಟಗಾನಹಳ್ಳಿ ಬಳಿ ಸಂಭವಿಸಿದೆ.
ಅಪಘಾತದಲ್ಲಿ ಕುಣಿಗಲ್ ಕಡೆಯಿಂದ ಬೆಂಗಳೂರಿಗೆ ಆಗಮಿಸುತ್ತಿದ್ದ ಸ್ವಿಫ್ಟ್ ಡಿಸೈರ್ ಕಾರು ರಾಷ್ಟ್ರೀಯ ಹೆದ್ದಾರಿ-75ರ ಡಿವೈಡರ್ ದಾಟಿ ಮತ್ತೊಂದು ಇಕೋ ಕಾರಿಗೆ ಡಿಕ್ಕಿ ಹೊಡೆದಿದೆ. ಸ್ವಿಫ್ಟ್ ಡಿಸೈರ್ ಕಾರಿನಲ್ಲಿದ್ದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲೂಕಿನ ಹಿರಿಕಳಲೆ ಗ್ರಾಮದ ಶಿವಕುಮಾರ್ (26), ಹೊಸಪೇಟೆಯ ಕಿರಣ್ (24) ಸಾವನ್ನಪ್ಪಿದ್ದಾರೆ.
ಶಿವಕುಮಾರ್, ಕಿರಣ್ ಅನುಗ್ರಹ ಪ್ರಾಪರ್ಟೀಸ್ ರಿಯಲ್ ಎಸ್ಟೇಟ್ ನಲ್ಲಿ ಕಾರ್ಯನಿರ್ವಹಿಸುತ್ತಿದ್ದು, ರಾಜಾಜಿನಗರದಲ್ಲಿ ವಾಸವಿದ್ದರು ಎನ್ನಲಾಗಿದೆ.
ಇನ್ನು ಇಕೋ ಕಾರು ಕೊಡಗಿನ ಮಡಿಕೇರಿಗೆ ತೆರಳುತ್ತಿತ್ತು. ಈ ಕಾರಿನಲ್ಲಿದ್ದ ಕಾವೇರಮ್ಮ (84), ಇವರ ಸೊಸೆ ರಶ್ಮಿ (51) ಮೃತಪಟ್ಟಿದ್ದಾರೆ. ಇನ್ನಿತರರಿಗೆ ಗಾಯಗಳಾಗಿವೆ.
ಡಿಕ್ಕಿಯ ರಭಸಕ್ಕೆ ಸ್ಥಳದಲ್ಲೇ 3 ಜನರ ಸಾವುನ್ನಪ್ಪಿದ್ದು, ಆಸ್ಪತ್ರೆಯಲ್ಲಿ ಒಬ್ಬರು ಅಸುನೀಗಿದ್ದಾರೆ. ಮತ್ತೊಬ್ಬರು ತೀತವ್ರವಾಗಿ ಗಾಯಗೊಂಡಿದ್ದು, ಸ್ಥಿತಿ ಗಂಭೀರವಾಗಿದೆ. ಸ್ವಿಫ್ಟ್ ಡಿಸೈರ್ ಕಾರಿನಲ್ಲಿ ಮೂರು ಜನ ಸಂಚರಿಸುತ್ತಿದ್ದು, ಚಾಲಕನಿಗೆ ಗಂಭೀರವಾದ ಗಾಯಗಳಾಗಿವೆ. ವಾಹನ ಚಾಲಕನನ್ನು ಖಾಸಗಿ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


