ಸಿಎಂ ಯಡಿಯೂರಪ್ಪ ಸೇರಿ ಬಿಜೆಪಿ ಟಾಪ್ ನಾಯಕರಿಗೂ ಕೊರೋನಾ ಪರೀಕ್ಷೆ!
ರಾಜ್ಯದ ಪ್ರಮುಖ ಬಿಜೆಪಿ ನಾಯಕರಿಗೂ ಕೊರೋನಾ ಬಿಸಿ ತಟ್ಟಿದೆ. ಇದಕ್ಕೆ ಸ್ವತಃ ಮುಖ್ಯಮಂತ್ರಿ ಯಡಿಯೂರಪ್ಪ ಕೂಡ ಹೊರತಾಗಿಲ್ಲ.

ಬೆಂಗಳೂರು: ರಾಜ್ಯದ ಪ್ರಮುಖ ಬಿಜೆಪಿ ನಾಯಕರಿಗೂ ಕೊರೋನಾ ಬಿಸಿ ತಟ್ಟಿದೆ. ಇದಕ್ಕೆ ಸ್ವತಃ ಮುಖ್ಯಮಂತ್ರಿ ಯಡಿಯೂರಪ್ಪ ಕೂಡ ಹೊರತಾಗಿಲ್ಲ.
ಇಂದು ಸಿಎಂ ಯಡಿಯೂರಪ್ಪಗೂ ಕೊರೊನಾ ಸೋಂಕಿನ ತಪಾಸಣೆ ಮಾಡಲಾಯಿತು. ಥರ್ಮಲ್ ಸ್ಕ್ರೀನಿಂಗ್ ಟೆಸ್ಟ್ ಮೂಲಕ ಮುಖ್ಯಮಂತ್ರಿ ಅವರನ್ನೂ ಕೊರೋನಾ ವೈರಸ್ ತಪಾಸಣೆ ಮಾಡಲಾಯಿತು.
ಮಾಗಡಿ ರಸ್ತೆಯ ಚನ್ನೇನಹಳ್ಳಿಯ ಆರ್ ಎಸ್ಎಸ್ ಜನಸೇವಾ ಸಂಸ್ಥೆಯಲ್ಲಿ ನಡೆದ ಸಭೆ ವೇಳೆ ಈ ಪರೀಕ್ಷೆ ನಡೆಸಲಾಯಿತು. ಸಭೆಗೆ ಹೋಗುವ ಮುನ್ನ ಸಿಎಂ ಸೇರಿ ಬಿಜೆಪಿ ನಾಯಕರಿಗೆ ಕೊರೋನಾ ಟೆಸ್ಟ್ ಮಾಡಲಾಯಿತು.
ಸಿಎಂ ಯಡಿಯೂರಪ್ಪ, ಡಿಸಿಎಂಗಳಾದ ಗೋವಿಂದ ಕಾರಜೋಳ, ಲಕ್ಷ್ಮಣ್ ಸವದಿ, ಸಚಿವ ಸೋಮಶೇಖರ್ ಸೇರಿ ಹಲವರಿಗೆ ಪರೀಕ್ಷೆ ನಡೆಸಲಾಯಿತು.
ಸಭೆಯಲ್ಲಿ ಆರ್ ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್, ಆರ್ ಎಸ್ಎಸ್ ಸರ ಕಾರ್ಯವಾಹ ಸುರೇಶ್ ಬೈಯಾಜಿ ಜೋಷಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಪಾಲ್ಗೊಂಡಿದ್ದರು. ಈ ಹಿನ್ನೆಲೆ ಸಿಬ್ಬಂದಿ ಸಿಎಂ ಯಡಿಯೂರಪ್ಪ ಸೇರಿ ಪ್ರಮುಖ ಬಿಜೆಪಿ ನಾಯಕರನ್ನು ಮುಂಜಾಗ್ರತಾ ಕ್ರಮವಾಗಿ ತಪಾಸಣೆ ಮಾಡಲಾಯಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


