ಮಳವಳ್ಳಿ: ಬೈಕ್ ಮೇಲೆ ಬಿದ್ದ ಮರ, ಸವಾರ ದುರ್ಮರಣ
ಬೈಕ್ ಸವಾರನ ಮೇಲೆ ಮರ ಉರುಳಿ ಬಿದ್ದಪರಿಣಾಮ ಆತ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಹಲಗೂರು ರಾಷ್ಟ್ರೀಯ ಹೆದ್ದಾರಿಯಲ್ಲಿಂದು ಸಂಜೆ ಸಂಭವಿಸಿದೆ

ಮಳವಳ್ಳಿ: ಬೈಕ್ ಸವಾರನ ಮೇಲೆ ಮರ ಉರುಳಿ ಬಿದ್ದಪರಿಣಾಮ ಆತ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಹಲಗೂರು ರಾಷ್ಟ್ರೀಯ ಹೆದ್ದಾರಿಯಲ್ಲಿಂದು ಸಂಜೆ ಸಂಭವಿಸಿದೆ
ಹಲಗೂರು ಸಮೀಪದ ಹುಯ್ಯನದೊಡ್ಡಿಗ್ರಾಮದ ಪುನಿತ್ ಮೃತಪಟ್ಟ ಬೈಕ್ ಸವಾರನಾಗಿದ್ದಾನೆ.
ಸುನಿಲ್ ಹಲಗೂರಿನಲ್ಲಿ ಬೋರ್‌ವೆಲ್ ಮೋಟಾರ್ ರಿಪೇರಿ ಕೆಲಸ ಮಾಡುತ್ತಿದ್ದು ಇಂದು ಸಂಜೆ ೪ ರ ಸಮಯದಲ್ಲಿ ನಂದೀಪುರದಿಂದ ಹಲಗೂರಿಗೆ ಬೈಕ್‌ನಲ್ಲಿ ತೆರಳುತ್ತಿದ್ದಾಗ ಜೆಪಿ ಡಾಬಾ ಮುಂದೆ ಏಕಾಏಕಿ ಮರ ಉರುಳಿ ಈ ದುರ್ಘಟನೆ ಸಂಭವಿಸಿದೆ.
ಈ ಸಂಬಂಧ ಹಲಗೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


