ವಿದೇಶದಿಂದ ಆಗಮಿಸಿದವರು ತಪಾಸಣೆಗೆ ಒಳಗಾಗುವುದು ಕಡ್ಡಾಯ- ಶ್ರೀರಾಮುಲು
ವಿದೇಶದಿಂದ ಆಗಮಿಸಿದವರು ತಪಾಸಣೆಗೆ ಒಳಗಾಗಬೇಕಿದ್ದು, ಸುಮಾರು 14 ದಿನಗಳ ಕಾಲ ಹೋಮ್ ಐಸೋಲೇಷನ್ ನಲ್ಲಿ ಇರುವುದು ಕಡ್ಡಾಯ. ವಿದೇಶದಿಂದ ಆಗಮಿಸಿದವರು ಚಾಚುತಪ್ಪದೇ ಈ ಕಾನೂನು ಪಾಲನೆ ಮಾಡಬೇಕು ಎಂದು ಆರೋಗ್ಯ ಸಚಿವ ಶ್ರೀರಾಮುಲು ಹೇಳಿದ್ದಾರೆ

ಕಲಬುರಗಿ:ವಿದೇಶದಿಂದ ಆಗಮಿಸಿದವರು ತಪಾಸಣೆಗೆ ಒಳಗಾಗಬೇಕಿದ್ದು, ಸುಮಾರು 14 ದಿನಗಳ ಕಾಲ ಹೋಮ್ ಐಸೋಲೇಷನ್ ನಲ್ಲಿ ಇರುವುದು ಕಡ್ಡಾಯ. ವಿದೇಶದಿಂದ ಆಗಮಿಸಿದವರು ಚಾಚುತಪ್ಪದೇ ಈ ಕಾನೂನು ಪಾಲನೆ ಮಾಡಬೇಕು ಎಂದು ಆರೋಗ್ಯ ಸಚಿವ ಶ್ರೀರಾಮುಲು ಹೇಳಿದ್ದಾರೆ
ಜಿಲ್ಲಾಸ್ಪತ್ರೆಯ ಐಸೋಲೇಟೆಡ್ ವಾರ್ಡ್ ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿದೇಶದಿಂದ ಆಗಮಿಸಿದವರು ತಪಾಸಣೆಗೆ ಒಳಗಾಗದಿದ್ದಲ್ಲಿ ಕಾನೂನು ರೀತಿಯ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ಮೃತ ವ್ಯಕ್ತಿಯ ಮನೆ ಸುತ್ತಮುತ್ತಲಿನ 5 ಕಿಮೀ ಪ್ರದೇಶವನ್ನು ಬಫರ್ ಜೋನ್ ಎಂದು ಘೋಷಣೆ ಮಾಡಲಾಗಿದೆ
ವೈದ್ಯಕೀಯ ಪರೀಕ್ಷೆಯಲ್ಲಿ ಪಾಸಿಟಿವ್, ನೆಗೆಟಿವ್ ಬಂದರೂ ಜನ ಭಯಪಡುವ ಅಗತ್ಯವಿಲ್ಲ. ಎಲ್ಲರೂ ಮಾಸ್ಕ್ ಧರಿಸಬೇಕು ಎಂದ ಅವರು ವೈರಸ್ ತಡೆಯುವ ಪ್ರಯತ್ನವನ್ನು ಸರ್ಕಾರ ಮಾಡುತ್ತಿದೆ ಎಂದರು.
ಬಳಿಕ ನಗರದ ಪಂಡಿತ್ ರಂಗಮಂದಿರದಲ್ಲಿ ಭಾರತೀಯ ವೈದ್ಯಕೀಯ ಮಂಡಳಿ (ಐಎಂಎ) ಜಿಲ್ಲಾ ಘಟಕದ ವತಿಯಿಂದ ಖಾಸಗಿ ವೈದ್ಯರಿಗೆ ಅರಿವು ಮೂಡಿಸುವ ಕಾರ್ಯಕ್ರಮದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಶರತ್ ಬಿ, ಕೊರೋನಾ ವೈರಸ್ ಹರಡುವುದನ್ನು ತಡೆಗಟ್ಟಲು ಖಾಸಗಿ ಆಸ್ಪತ್ರೆಗಳು ಸೇರಿ ವೈದ್ಯರು ಜಿಲ್ಲಾಡಳಿತದ ಜೊತೆಗೆ ಕೈಜೋಡಿಸಬೇಕು ಎಂದು ಮನವಿ ಮಾಡಿದರು
ಮಾಸ್ಕ್ ಧರಿಸುವುದು ಸೇರಿದಂತೆ ಮುಂಜಾಗ್ರತೆ ವಹಿಸಿದರೆ ಯಾವುದೇ ಸಮಸ್ಯೆ ಆಗುವುದಿಲ್ಲ. ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆಂದು ಬರುವ ಯಾವುದೇ ರೋಗಿಯನ್ನು ಉಪಚರಿಸಿ.ಒಂದು ವೇಳೆ ಕೆಮ್ಮು, ಜ್ವರ, ಶೀತ, ಉಸಿರಾಟದ ಸಮಸ್ಯೆ ಇದ್ದು, ಶಂಕಿತ ಕೊರೊನಾ ವೈರಸ್ ಲಕ್ಷಣಗಳಿದ್ದಲ್ಲಿ ಮಾತ್ರ ಸಹಾಯವಾಣಿ -1047ಕ್ಕೆ ಕರೆ ಮಾಡಬೇಕು. ಆಗ ಆರೋಗ್ಯ ಇಲಾಖೆಯ ಸಿಬ್ಬಂದಿ ಬಂದು ರೋಗಿಗಳನ್ನು ಕರೆದೊಯ್ಯಲಿದ್ದಾರೆ. ಬಳಿಕ ಅವರಿಗೆ ಕಲಬುರಗಿ ನಗರದ ಜಿಮ್ಸ್ ಮತ್ತು ಇಎಸ್ಐಸಿಯ ಕ್ವಾರಾಂಟೀನ್ ಹಾಗೂ ಐಸೋಲೇಷನ್ ವಾರ್ಡಗಳಲ್ಲಿ ದಾಖಲಿಸಿ, ನಿಗಾವಹಿಸಲಿದ್ದಾರೆ ಎಂದು ಅವರು ವಿವರಿಸಿದರು
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


