ಉತ್ತರ ಪ್ರದೇಶ: ನಕಲಿ ಕೈ ಸ್ಯಾನಿಟೈಸರ್, ಮಾಸ್ಕ್ ಕಾರ್ಖಾನೆ ಪತ್ತೆ
ಕೈ ಸ್ಯಾನಿಟೈಸರ್ ಹಾಗೂ ಮಾಸ್ಕ್ ಗಳು ಅತ್ಯವಶ್ಯಕ ಸರಕುಗಳು ಎಂದು ಕೇಂದ್ರ ಸರ್ಕಾರ ಘೋಷಿಸಿದ ಮಾರನೇ ದಿನವೇ ಉತ್ತರ ಪ್ರದೇಶದ ನೊಯ್ಡಾದಲ್ಲಿ ನಕಲಿ ಕೈ ಸ್ಯಾನಿಟೈಸರ್ ಹಾಗೂ ಮಾಸ್ಕ್ ಕಾರ್ಖಾನೆ ಪತ್ತೆಯಾಗಿದ್ದು, ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.

ನೊಯ್ಡಾ: ಕೈ ಸ್ಯಾನಿಟೈಸರ್ ಹಾಗೂ ಮಾಸ್ಕ್ ಗಳು ಅತ್ಯವಶ್ಯಕ ಸರಕುಗಳು ಎಂದು ಕೇಂದ್ರ ಸರ್ಕಾರ ಘೋಷಿಸಿದ ಮಾರನೇ ದಿನವೇ ಉತ್ತರ ಪ್ರದೇಶದ ನೊಯ್ಡಾದಲ್ಲಿ ನಕಲಿ ಕೈ ಸ್ಯಾನಿಟೈಸರ್ ಹಾಗೂ ಮಾಸ್ಕ್ ಕಾರ್ಖಾನೆ ಪತ್ತೆಯಾಗಿದ್ದು, ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.
ಕಮರ್ಷಿಯಲ್ ಹಬ್ ಸೆಕ್ಟರ್ 63ರಲ್ಲಿದ್ದ ಕಂಪನಿ ಮೇಲೆ ಇಂದು ಮಧ್ಯಾಹ್ನ 2-30ರ ಸುಮಾರಿನಲ್ಲಿ ದಾಳಿ ನಡೆಸಲಾಗಿದೆ ಎಂದು ಉಪ ವಿಭಾಗೀಯ ಮ್ಯಾಜಿಸ್ಟ್ರೇಟ್ ರಾಜೀವ್ ರೈ ಹೇಳಿದ್ದಾರೆ.
ನಾಲ್ವರನ್ನು ಸ್ಥಳದಲ್ಲಿಯೇ ಬಂಧಿಸಲಾಗಿದ್ದು, ಸುಮಾರು 5 ಸಾವಿರ ಮುಖಕ್ಕೆ ಹಾಕುವ ಮಾಸ್ಕ್ ಗಳು ಹಾಗೂ 5 ಸಾವಿರ ಕೈ ಸ್ಯಾನಿಟೈಸರ್ ಬಾಟಲಿಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ರೈ ಪಿಟಿಐ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.
ಎರಡು ವಸ್ತುಗಳು 'ಎಸ್‌ಜಿ ಗ್ರೂಪ್' ಎಂಬ ಹೆಸರನ್ನು ಹೊಂದಿವೆ ಮತ್ತು ಅವು ಸುಮಾರು 10 ಲಕ್ಷ ರೂಪಾಯಿಗಳ ಮೌಲ್ಯವನ್ನು ಹೊಂದಿವೆ ಆದರೆ ಅವು ನಿಜವಾದ ಉತ್ಪನ್ನಗಳಲ್ಲ ಎಂದು ಅವರು ಹೇಳಿದ್ದಾರೆ.
ಮಾರಕ ಕೋವಿಡ್ -19 ಭೀತಿಯ ನಡುವೆ ನೊಯ್ಡಾ ಮತ್ತು ಗ್ರೇಟರ್ ನೊಯ್ಡಾದಲ್ಲಿ ಆರಂಭದಲ್ಲಿ ಕೈ ಸ್ಯಾನಿಟೈಸರ್ ಮತ್ತು ಮಾಸ್ಕ್ ಗಳ ಪೂರೈಕೆಯಲ್ಲಿ ಕೊರತೆಯಾಗುತ್ತಿದೆ ಎಂದು ಔಷಧಿ ವ್ಯಾಪಾರಿಗಳು ಹೇಳುತ್ತಿದ್ದರೆ ಈ ವಸ್ತುಗಳು ದೊರೆತರೂ ದುಬಾರಿ ಬೆಲೆಗೆ ಮಾರಾಟ ಮಾಡಲಾಗುತ್ತಿದೆ ಎಂದು ಜನರು ಆಕ್ರೋಶ ವ್ಯಕ್ತಪಡಿಸಿದ್ದರು.
ಸ್ಯಾನಿಟೈಸರ್ ಮತ್ತು ಮಾಸ್ಕ್ ಗಳ ಮಾರಾಟದಲ್ಲಿ ಅಕ್ರಮ ಕಂಡುಬಂದರೆ ಕಾನೂನು ರೀತಿಯ ಕ್ರಮ ಕೈಗೊಳ್ಳಲಾಗುವುದು ಎಂದು ಗೌತಮ್ ಬುದ್ಧ ನಗರ ಜಿಲ್ಲಾಧಿಕಾರಿ ಬಿಎನ್ ಸಿಂಗ್ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


