ರಾಜ್ಯ

ಚೀನಾದಿಂದ ಭಾರತಕ್ಕೆ ಬಂದು ರೋಗ ಹರಡಲು ಇಷ್ಟವಿಲ್ಲ, ಸತ್ತರೇ ಇಲ್ಲೇ ಸಾಯುತ್ತೇನೆ ಎಂದ ಕನ್ನಡಿಗ, ವಿಡಿಯೋ ವೈರಲ್!

ತುಮಕೂರು ಮೂಲದ ವಿದ್ಯಾರ್ಥಿಯೋರ್ವ ಚೀನಾದಲ್ಲಿ ವೈದ್ಯಕೀಯ ವ್ಯಾಸಂಗ ಮಾಡುತ್ತಿದ್ದು ಕೊರೋನಾ ವೈರಸ್ ಭೂತದಿಂದ ಕಂಗೆಟ್ಟಿರುವ ಚೀನಾದಿಂದ ಭಾರತಕ್ಕೆ ಬಂದು ಆತಂಕ ಸೃಷ್ಟಿಸಲ್ಲ, ಆಗೂ ನನಗೂ ವೈರಸ್ ಸೋಂಕಿದರೆ ಇಲ್ಲೇ ಸಾಯುತ್ತೇನೆ ಎಂದು ಹೇಳಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಚೀನಾದಿಂದ ಭಾರತಕ್ಕೆ ಬಂದು ರೋಗ ಹರಡಲು ಇಷ್ಟವಿಲ್ಲ, ಸತ್ತರೇ ಇಲ್ಲೇ ಸಾಯುತ್ತೇನೆ ಎಂದ ಕನ್ನಡಿಗ, ವಿಡಿಯೋ ವೈರಲ್!
ತುಮಕೂರು ವಿದ್ಯಾರ್ಥಿ
Published On :

ಬೆಂಗಳೂರು: ತುಮಕೂರು ಮೂಲದ ವಿದ್ಯಾರ್ಥಿಯೋರ್ವ ಚೀನಾದಲ್ಲಿ ವೈದ್ಯಕೀಯ ವ್ಯಾಸಂಗ ಮಾಡುತ್ತಿದ್ದು ಕೊರೋನಾ ವೈರಸ್ ಭೂತದಿಂದ ಕಂಗೆಟ್ಟಿರುವ ಚೀನಾದಿಂದ ಭಾರತಕ್ಕೆ ಬಂದು ಆತಂಕ ಸೃಷ್ಟಿಸಲ್ಲ, ಆಗೂ ನನಗೂ ವೈರಸ್ ಸೋಂಕಿದರೆ ಇಲ್ಲೇ ಸಾಯುತ್ತೇನೆ ಎಂದು ಹೇಳಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. 

ಎಂಬಿಬಿಎಸ್ ವಿದ್ಯಾರ್ಥಿ ಸಾಹಿಲ್ ಹುಸೇನ್ ಚೀನಾದ ವಾನ್ಲಿ ಜಿಲ್ಲೆಯಲ್ಲಿ ಕಳೆದ ಮೂರು ವರ್ಷಗಳಿಂದ ಉಳಿದುಕೊಂಡಿದ್ದಾರೆ. ನಾಚಂಗ್ ಸಿಟಿಯ ಜಿಯಾಂಗ್ಸಿ ಯೂನಿರ್ವಸಿಟಿ ಆಫ್ ಟ್ರಡಿಷನಲ್ ಅಂಡ್ ಚೈನೀಸ್ ಮೆಡಿಸಿನ್ಸ್ ವೈದ್ಯಕೀಯ ವಿಶ್ವವಿದ್ಯಾಲಯದಲ್ಲಿ ವೈದ್ಯಕೀಯ ವ್ಯಾಸಂಗ ಮಾಡುತ್ತಿದ್ದಾರೆ. ಇವರು ತುಮಕೂರಿನ ಶಿಕ್ಷಕ ರಿಜ್ವಾನ್ ಭಾಷಾ ಅವರ ಕಿರಿಯ ಪುತ್ರ. 

ಸಾಹಿಲ್ ವಿಡಿಯೋವೊಂದನ್ನು ಮಾಡಿ ಸಾಮಾಜಿಕ ಜಾಲತಾಣಕ್ಕೆ ಹರಿಬಿಟ್ಟಿದ್ದಾರೆ. ಈ ವಿಡಿಯೋದಲ್ಲಿ ಭಾರತಕ್ಕೆ ಬಂದು ರೋಗ ಹರಡಲು ಇಷ್ಟವಿಲ್ಲ ಎಂದು ಹೇಳಿದ್ದಾರೆ.

ಇಂಗ್ಲೆಂಡಿನಿಂದ ಬಂದಿದ್ದ ಪ್ರಜೆ ಸೇರಿದಂತೆ ದೇಶದಲ್ಲಿ ಕೊರೋನಾ ವೈರಾಣು ಪೀಡಿತರ ಸಂಖ್ಯೆ 107ಕ್ಕೇರಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸೋಂಕನ್ನು ತಡೆಗಟ್ಟಲು ಹಲವು ಕ್ರಮಗಳನ್ನು ಕೈಗೊಳ್ಳುತ್ತಿದ್ದರೂ ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.