ಶಿಕ್ಷಕರ ವರ್ಗಾವಣೆ ನಿಯಂತ್ರಣ ವಿಧೇಯಕಕ್ಕೆ ವಿಧಾನಸಭೆ ಅಂಗೀಕಾರ
ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳು (ಶಿಕ್ಷಕರ ವರ್ಗಾವಣೆ ನಿಯಂತ್ರಣ) ವಿಧೇಯಕಕ್ಕೆ ವಿಧಾನಸಭೆಯಲ್ಲಿ ಅಂಗೀಕಾರ ನೀಡಲಾಯಿತು.

ಬೆಂಗಳೂರು: ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳು (ಶಿಕ್ಷಕರ ವರ್ಗಾವಣೆ ನಿಯಂತ್ರಣ) ವಿಧೇಯಕಕ್ಕೆ ವಿಧಾನಸಭೆಯಲ್ಲಿ ಅಂಗೀಕಾರ ನೀಡಲಾಯಿತು. ಕಳೆದ ವಾರ ಮಂಡಿಸಲಾಗಿದ್ದ ವಿಧೇಯಕವನ್ನು ಸರ್ವಾನುಮತದಿಂದ ವಿಧಾನಸಭೆಯಲ್ಲಿ ಅಂಗೀಕರಿಸಲಾಯಿತು.
ಈ ವೇಳೆ ಮಾತನಾಡಿದ ಶಿಕ್ಷಣ ಸಚಿವ ಸುರೇಶ್ ಕುಮಾರ್, ಇದೊಂದು ಶಿಕ್ಷಕ ಸ್ನೇಹಿ, ಶಿಕ್ಷಣಕ್ಕೆ ಪೂರಕ ಹಾಗೂ ವಿದ್ಯಾರ್ಥಿಗಳ ಹಿತಚಿಂತಕ ವಿಧೇಯಕವಾಗಿದೆ. ವರ್ಗಾವಣೆ ಸರಳೀಕರಣಗೊಳಿಸಲು ಈ ವಿಧೇಯಕ ತರಲಾಗಿದೆ ಎಂದು ತಿಳಿಸಿದರು.
ಈ ವಿಧೇಯಕದ ಪ್ರಕಾರ ಶಿಕ್ಷಕ ಅಥವಾ ಆ ಶಿಕ್ಷಕರ ಪತಿ ಅಥವಾ ಪತ್ನಿ ಅಥವಾ ಮಕ್ಕಳು ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದಲ್ಲಿ ಮತ್ತು ಅದಕ್ಕೆ ವೈದ್ಯಕೀಯ ಚಿಕಿತ್ಸೆ ಎಲ್ಲೂ ದೊರೆಯದಿದ್ದಲ್ಲಿ ಅಂತಹವರಿಗೆ ಕಡ್ಡಾಯ ವರ್ಗಾವಣೆಯಿಂದ ವಿನಾಯಿತಿ ನೀಡಲಾಗುತ್ತದೆ.
ಪತಿ ಮತ್ತು ಪತ್ನಿ ಪ್ರಕರಣದ ಸಂದರ್ಭದಲ್ಲಿ ಒಂದೇ ಸ್ಥಳದಲ್ಲಿ ಸ್ಥಳ ನಿಯುಕ್ತಿಗಾಗಿ ಕಡ್ಡಾಯ ವರ್ಗಾವಣೆಯಿಂದ ವಿನಾಯಿತಿ ನೀಡಲಾಗುವುದು
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


