ರಾಜ್ಯ

ಕಲಬುರಗಿ ಜಿಲ್ಲಾಧಿಕಾರಿ ಭಾವಚಿತ್ರಕ್ಕೆ ಹಾಲಿನ ಅಭಿಷೇಕ

ಕೊರೊನಾ ತಡೆಗಟ್ಟಲು ಜನಪ್ರತಿನಿಧಿಗಿಂತ ಕಲಬುರಗಿ ಜಿಲ್ಲಾಧಿಕಾರಿ ಅವಿರತ ಶ್ರಮಕ್ಕೆ ನಾಗರೀಕರು ಮೆಚ್ಚುಗೆ ವ್ಯಕ್ತಪಡಿಸಿ, ಶರಣಬಸವೇಶ್ವರ ದೇವಸ್ಥಾನದ ಮುಂದೆ ಜಿಲ್ಲಾಧಿಕಾರಿ ಶರತ್ ಬಿ ಅವರ ಭಾವಚಿತ್ರಕ್ಕೆ ಹಾಲಿನ ಅಭಿಷೇಕ ಮಾಡುವ ಮೂಲಕ ಕೃತಜ್ಞತೆ ಸಲ್ಲಿಸಿದ್ದಾರೆ.

ಕಲಬುರಗಿ ಜಿಲ್ಲಾಧಿಕಾರಿ ಭಾವಚಿತ್ರಕ್ಕೆ ಹಾಲಿನ ಅಭಿಷೇಕ
ಜಿಲ್ಲಾಧಿಕಾರಿ ಶರತ್
Published On :

ಕಲಬುರಗಿ: ಕೊರೊನಾ ಸೋಂಕಿಗೆ ನಗರದ ಓರ್ವ ವೃದ್ಧ ಬಲಿಯಾಗಿದ್ದಲ್ಲದೇ, ಸಂಬಂಧಿಕನೋರ್ವನಲ್ಲಿ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಜಿಲ್ಲೆಯ ಜನ ಬೆಚ್ಚಿ ಬಿದ್ದಿದ್ದಾರೆ.

ಈಗಾಗಲೇ ಜಿಲ್ಲಾಡಳಿತ ಎಲ್ಲಾ ಮುನ್ನೇಚ್ಚರಿಕೆ ಕ್ರಮ ಎಚ್ಚರಿಕೆ ಕೈಗೊಂಡಿದ್ದು, ಕಲಬುರಗಿಯನ್ನು ಕೊರೊನಾದಿಂದ ಕಾಪಾಡಲು ನಾಗರಿಕರು ಶರಣ ಬಸವೇಶ್ವರರ ಮೊರೆ ಹೋಗಿದ್ದಾರೆ.

ನಗರದ ಶ್ರೀ ಶರಣಬಸವೇಶ್ವರ ದೇವಸ್ಥಾನದಲ್ಲಿ ಕೊರೊನಾದಿಂದ ಕಾಪಾಡುವಂತೆ ಪ್ರಾರ್ಥಿಸಿ 
ಕಲಬುರಗಿ ನಾಗರಿಕ ಸಮಿತಿಯಿಂದ ವಿಶೇಷ ಪೂಜೆ ಸಲ್ಲಿಸಲಾಗಿದೆ. 

ಅಲ್ಲದೇ, ಕೊರೊನಾ ತಡೆಗಟ್ಟಲು ಜನಪ್ರತಿನಿಧಿಗಿಂತ ಕಲಬುರಗಿ ಜಿಲ್ಲಾಧಿಕಾರಿ ಅವಿರತ ಶ್ರಮಕ್ಕೆ ನಾಗರೀಕರು ಮೆಚ್ಚುಗೆ ವ್ಯಕ್ತಪಡಿಸಿ, ಶರಣಬಸವೇಶ್ವರ ದೇವಸ್ಥಾನದ ಮುಂದೆ ಜಿಲ್ಲಾಧಿಕಾರಿ ಶರತ್ ಬಿ ಅವರ ಭಾವಚಿತ್ರಕ್ಕೆ ಹಾಲಿನ ಅಭಿಷೇಕ ಮಾಡುವ ಮೂಲಕ ಕೃತಜ್ಞತೆ ಸಲ್ಲಿಸಿದ್ದಾರೆ.

ಕೊರೋನಾ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಅವರು ಅವಿರತವಾಗಿ ಶ್ರಮಿಸುತ್ತಿದ್ದು, ಅವರ ಕಾರ್ಯ ವೈಖರಿ ಇದೀಗ ವ್ಯಾಪಕ ಪ್ರಸಂಶೆಗೆ ಪಾತ್ರವಾಗಿದೆ. ಸಾಮಾಜಿಕ ಜಾಲ ತಾಣಗಳಲ್ಲೂ ಶರತ್ ಅವರ ಕ್ರಮಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.