ಬೆಂಗಳೂರಿನಲ್ಲಿ ಭೀಕರ ಸರಣಿ ಅಪಘಾತ, ಕಾರು ಚಾಲಕ ಸ್ಥಳದಲ್ಲೇ ಸಾವು
ಲಾರಿಯೊಂದು ಎರಡು ಕಾರುಗಳಿಗೆ ಢಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರು ಚಾಲಕನೊಬ್ಬ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರು ಇಂದಿರಾನಗರದಲ್ಲಿ ನಡೆದಿದೆ

ಬೆಂಗಳೂರು: ಲಾರಿಯೊಂದು ಎರಡು ಕಾರುಗಳಿಗೆ ಢಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರು ಚಾಲಕನೊಬ್ಬ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರು ಇಂದಿರಾನಗರದಲ್ಲಿ ನಡೆದಿದೆ.
ಇಂದಿರಾನಗರದ ಬಿನ್ನಮಂಗಲದಲ್ಲಿ ರಸ್ತೆ ಸಿಗ್ನಲ್ ಸಮೀಪ ನಿಂತಿದ್ದ ಎರಡು ಕಾರುಗಳಿಗೆ ಹಿಂದಿನಿಂದ ಬಂದ ಲಾರಿ ಢಿಕ್ಕಿಯಾಗಿದೆ. ಸಿಲಿಂಡರ್ ತುಂಬಿದ್ದ ಲಾರಿ ಡಿಕ್ಕಿಯಾಗಿ ಇಂಡಿಕಾ( KA40. 6145 ) ಕಾರಿನ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ಇನ್ನೊಂದು ಕಾರಿನಲ್ಲಿ ಏರ್ ಬ್ಯಾಗ್ ತೆರೆದುಕೊಂಡ ಕಾರಣ ಆ ಕಾರಿನ ಚಾಲಕ ಪ್ರಾಣಾಪಾಯದಿಂಡ ಪಾರಾಗಿದ್ದಾನೆ. ಘಟನೆಯಲ್ಲಿ ಎರಡೂ ಕಾರುಗಳು ಸಂಪೂರ್ಣ ಜಖಂ ಆಗಿದೆ.

ಹಲಸೂರು ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಇದೇ ವೇಳೆ ಅಪಘಾತಕ್ಕೆ ಕಾರಣವಾಗಿದ್ದ ಲಾರಿ ಚಾಲಕ ಪರಾರಿಯಾಗಿದ್ದು ಪೋಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


