ನಟ ವಿಜಯ್ ದೇವರಕೊಂಡ ಮನವೊಲಿಕೆಗಾಗಿ ಸುಧಾ ಮೂರ್ತಿ ಸಹಿ ನಕಲಿ ಮಾಡಿದ್ದ ಕರ್ನಾಟಕದ ಟೆಕ್ಕಿ ಬಂಧನ!
ಇನ್ಫೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಸುಧಾ ಮೂರ್ತಿ ಅವರ ಸಹಿಯನ್ನು ನಕಲಿ ಮಾಡಿದ ಆರೋಪದ ಮೇಲೆ ಹೈದರಾಬಾದ್‌ನ 23 ವರ್ಷದ ಟೆಕ್ಕಿ(ಐಟಿ ಉದ್ಯೋಗಿ)ಯನ್ನು ಪೊಲೀಸರು ಸೋಮವಾರ ಬಂಧಿಸಿದ್ದಾರೆ.

ಬೆಂಗಳೂರು: ಇನ್ಫೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಸುಧಾ ಮೂರ್ತಿ ಅವರ ಸಹಿಯನ್ನು ನಕಲಿ ಮಾಡಿದ ಆರೋಪದ ಮೇಲೆ ಹೈದರಾಬಾದ್‌ನ 23 ವರ್ಷದ ಟೆಕ್ಕಿ(ಐಟಿ ಉದ್ಯೋಗಿ)ಯನ್ನು ಪೊಲೀಸರು ಸೋಮವಾರ ಬಂಧಿಸಿದ್ದಾರೆ.
ತೆಲುಗು ಸೂಪರ್‌ಸ್ಟಾರ್ ವಿಜಯ್ ದೇವರಕೊಂಡ ಅವರು ತಮ್ಮ ಮೊಬೈಲ್ ಆಪ್‍ನ ಬ್ರಾಂಡ್ ಅಂಬಾಸಿಡರ್ ಆಗುವಂತೆ ಮನವೊಲಿಸುವ ಸಲುವಾಗಿ ಸುಧಾ ಮೂರ್ತಿ ಅವರ ಸಹಿಯನ್ನು ನಕಲಿ ಮಾಡಿದ್ದ ಆರೋಪಿ ಎಲ್ ಸಾಯಿಕೃಷ್ಣ ನನ್ನು ಪೊಲೀಸರು ಬಂಧಿಸಿದ್ದಾರೆ.
ಸುಧಾ ಮೂರ್ತಿ ಅವರ ಹೆಸರನ್ನು ಬಳಸಿದರೆ ತನ್ನ ಆಪ್ ಗೆ ರಾಯಬಾರಿಯಾಗಲು ದೇವರಕೊಂಡ ಅವರನ್ನು ಮನವೊಲಿಸಲು ಸುಲಭವಾಗುತ್ತದೆ ಎಂದು ಭಾವಿಸಿದ್ದಾಗಿ ಸಾಯಿಕೃಷ್ಣ ಪೊಲೀಸರಿಗೆ ತಿಳಿಸಿದ್ದಾನೆ.
ನಟನಿಗೆ ಪತ್ರ ಬಂದಾಗ ಆತನ ಸಿಬ್ಬಂದಿ ಅದರಲ್ಲಿ ಏನೋ ತಪ್ಪು ಇದೆ ಎಂದು ಭಾವಿಸಿ ತಕ್ಷಣ ಇನ್ಫೋಸಿಸ್ ಪ್ರತಿಷ್ಠಾನ ಅಧಿಕಾರಿಗಳನ್ನು ಎಚ್ಚರಿಸಿದ್ದಾರೆ.
ತಕ್ಷಣ ಪ್ರತಿಷ್ಠಾನ ಪೊಲೀಸರಿಗೆ ದೂರು ನೀಡಿದ್ದರಿಂದ ಸಾಯಿಕೃಷ್ಣನನ್ನು ಬಂಧಿಸಲು ಸಾಧ್ಯವಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


