ಕೊರೋನಾ ಭೀತಿ: ಬೆಂಗಳೂರು ನಗರ ಸಂಪೂರ್ಣ ಸ್ತಬ್ಧಗೊಳಿಸಲು ಚಿಂತನೆ?
ಕೊರೋನಾ ಸೋಂಕು ಹರಡುವಿಕೆ ತಡೆಯಲು ಬೆಂಗಳೂರು ನಗರದ ಜನತೆ ಮನೆಯಿಂದ ಹೊರ ಬರದಂತೆ ನಿರ್ಬಂಧ ಹೇರುವ ಕುರಿತು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ.

ಬೆಂಗಳೂರು: ಕೊರೋನಾ ಸೋಂಕು ಹರಡುವಿಕೆ ತಡೆಯಲು ಬೆಂಗಳೂರು ನಗರದ ಜನತೆ ಮನೆಯಿಂದ ಹೊರ ಬರದಂತೆ ನಿರ್ಬಂಧ ಹೇರುವ ಕುರಿತು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ಆದರೆ, ಈ ಬಗ್ಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಒಲವು ಹೊಂದಿಲ್ಲ ಎಂದು ಹೇಳಲಾಗುತ್ತಿದೆ.
ರಾಜ್ಯದಲ್ಲಿ ಕೊರೋನಾ ವೈರಸ್ 2ನೇ ಹಂತದಲ್ಲಿ ಹರಡಿದ್ದು, ನಂತರ ನಿಯಂತ್ರಿಸಲು ಸರ್ಕಾರಕ್ಕೆ ಕಷ್ಟವಾಗುತ್ತದೆ ಎನ್ನುವ ಲೆಕ್ಕಾಚಾರದಲ್ಲಿ ಈ ರೀತಿಯ ಆಲೋಚನೆ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ.
ವೈದ್ಯರು, ಪೊಲೀಸ್ ಹಾಗೂ ಪತ್ರಕರ್ತರಿಗೆ ಮಾತ್ರ ಕರ್ತವ್ಯದ ಹಿನ್ನೆಲೆಯಲ್ಲಿ ಮನೆಯಿಂದ ಹೊರ ಬರಲು ಅವಕಾಶ ಕಲ್ಪಿಸಿ, ಬೇರೆ ಬೇರೆ ವೃತ್ತಿ ನಿರತರು ಹಾಗೂ ಸಾಮಾನ್ಯ ಜನರು ಅನಗತ್ಯವಾಗಿ ಮನೆಯಿಂದ ಹೊರಗೆ ಬರುವುದಕ್ಕೆ ನಿರ್ಬಂಧ ಹೇರುವ ಸಾಧ್ಯತೆ ಬಗ್ಗೆ ಮಾತುಗಳು ಕೇಳಿಬರುತ್ತಿದೆ.
ದುಡಿಯವ ವರ್ಗ ಹಾಗೂ ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಒಂದು ತಿಂಗಳ ವಿಶೇಷ ಪಡಿತರ ವ್ಯವಸ್ಥೆ ಕಲ್ಪಿಸಿ, ಅವರಿಗೆ ನಿತ್ಯದ ಜೀವನೋಪಾಯಕ್ಕೆ ಯಾವುದೇ ರೀತಿಯ ತೊಂದರೆಯಾಗದಂತೆ ಕ್ರಮ ವಹಿಸಲು ಚಿಂತನೆ ನಡೆದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


