ಕರ್ನಾಟಕ ಲೋಕಾಯುಕ್ತ (ತಿದ್ದುಪಡಿ ) ವಿಧೇಯಕ 2020ಕ್ಕೆ ವಿಧಾನಸಭೆ ಒಪ್ಪಿಗೆ
ಲೋಕಾಯುಕ್ತರು ಯಾವುದೇ ಪ್ರಕರಣದ ವಿಚಾರಣೆಯನ್ನು ತಾವಾಗಿಯೇ ಮಾಡಲಾಗದಿದ್ದ ಸಂದರ್ಭದಲ್ಲಿ ಅಂತಹ ಪ್ರಕರಣವನ್ನು ಉಪ ಲೋಕಾಯುಕ್ತರಿಗೆ ವರ್ಗಾವಣೆ ಮಾಡುವ ಅಧಿಕಾರ ನೀಡುವ ಉದ್ದೇಶದ ಕರ್ನಾಟಕ ಲೋಕಾಯುಕ್ತ (ತಿದ್ದಪಡಿ) ವಿಧೇಯಕ 2020ಕ್ಕೆ ವಿಧಾನಸಭೆ ಒಪ್ಪಿಗೆ ನೀಡಿತು

ಬೆಂಗಳೂರು: ಲೋಕಾಯುಕ್ತರು ಯಾವುದೇ ಪ್ರಕರಣದ ವಿಚಾರಣೆಯನ್ನು ತಾವಾಗಿಯೇ ಮಾಡಲಾಗದಿದ್ದ ಸಂದರ್ಭದಲ್ಲಿ ಅಂತಹ ಪ್ರಕರಣವನ್ನು ಉಪ ಲೋಕಾಯುಕ್ತರಿಗೆ ವರ್ಗಾವಣೆ ಮಾಡುವ ಅಧಿಕಾರ ನೀಡುವ ಉದ್ದೇಶದ ಕರ್ನಾಟಕ ಲೋಕಾಯುಕ್ತ (ತಿದ್ದಪಡಿ) ವಿಧೇಯಕ 2020ಕ್ಕೆ ವಿಧಾನಸಭೆ ಒಪ್ಪಿಗೆ ನೀಡಿತು
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಪರವಾಗಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ ಅವರು ಮಂಡಿಸಿದ ಈ ವಿಧೇಯಕಕ್ಕೆ ಸದನ ಧ್ವನಿ ಮತದ ಅಂಗೀಕಾರ ದೊರೆಯಿತು.
ಇದಕ್ಕೂ ಮುನ್ನಾ ವಿಧೇಯಕ ಕುರಿತು ಮಾತನಾಡಿದ ಕಾನೂನು ಸಚಿವ ಮಾಧುಸ್ವಾಮಿ, ಲೋಕಾಯುಕ್ತರು ಅವರಾಗಿಯೇ ಯಾವುದೇ ಪ್ರಕರಣದ ವಿಚಾರಣೆ ಮಾಡಲಾಗುವುದಿಲ್ಲ ಎಂದಾಗ ಉಪ ಲೋಕಾಯುಕ್ತರಿಗೆ ವರ್ಗಾಯಿಸುವ ಅಧಿಕಾರ ನೀಡುವ ಉದ್ದೇಶದಿಂದ ಈ ತಿದ್ದುಪಡಿ ತರಲಾಗಿದೆ
ಲೋಕಾಯುಕ್ತರು ಸ್ವಂತ ಅಥವಾ ಬೇರೆ ಕಾರಣಗಳಿಂದ ಪ್ರಕರಣದ ವಿಚಾರಣೆಯಿಂದ ಸಾಧ್ಯವಾಗದ ಸಂದರ್ಭದಲ್ಲಿ ಉಪ ಲೋಕಾಯುಕ್ತರಿಗೆ ವರ್ಗಾವಣೆಯಾಗಲಿದೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


