ಈಶ್ವರಪ್ಪ ಮನೆಯಲ್ಲಿ ಬೆಂಕಿ: ಪ್ರಾಣಾಪಾಯದಿಂದ ಪಾರಾದ ಸಚಿವರು, ಪತ್ನಿ
ಪಂಚಾಯತ್ ರಾಜ್ ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಮನೆಯಲ್ಲಿ ತಾಂತ್ರಿಕ ದೋಷದಿಂದ ಅಗ್ನಿ ಅವಘಡ ಸಂಭವಿಸಿದ್ದು, ಸಚಿವರು ಹಾಗೂ ಅವರ ಪತ್ನಿ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಮಂಗಳವಾರ ನಡೆದಿದೆ.

ಬೆಂಗಳೂರು: ಪಂಚಾಯತ್ ರಾಜ್ ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಮನೆಯಲ್ಲಿ ತಾಂತ್ರಿಕ ದೋಷದಿಂದ ಅಗ್ನಿ ಅವಘಡ ಸಂಭವಿಸಿದ್ದು, ಸಚಿವರು ಹಾಗೂ ಅವರ ಪತ್ನಿ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಮಂಗಳವಾರ ನಡೆದಿದೆ.
ನಗರದ ಗಾಂಧಿ ಭವನದ ಸಮೀಪ ಇರುವ ಸಚಿವರ ಸರ್ಕಾರಿ ನಿವಾಸದಲ್ಲಿ ಸಚಿವರು ಮಲಗುವ ಕೋಣೆಯಲ್ಲಿ ಎಸಿ ಸ್ವಿಚ್ ಹಾಕುತ್ತಿದ್ದಂತೆ ಎಸಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ಈಶ್ವರಪ್ಪ ಮತ್ತು ಅವರ ಪತ್ನಿ ಮನೆಯಿಂದ ಹೊರಗೆ ಬಂದು ಅಳಿಯ ಸಂತೋಷ್'ಗೆ ವಿಚಾರ ತಿಳಿಸಿದ್ದಾರೆ. ಬಳಿಕ ಅಗ್ನಿಶಾಮಕ ದಳದ ಸಿಬ್ಬಂದಿಗೂ ಮಾಹಿತಿ ನೀಡಿದ್ದಾರೆ.
ಕೂಡಲೇ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ, ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ, ಅದಾಗಲೇ ಈಶ್ವರಪ್ಪ ಅವರು ಮಲಗುವ ಕೋಣೆ ಸಂಪೂರ್ಣವಾಗಿ ಭಸ್ಮವಾಗಿದೆ. ರೂಮ್'ನಲ್ಲಿದ್ದ ಬೆಡ್, ಎಸಿ, ಬಟ್ಟೆಗಲು, ಸೋಫಾ, ಕರ್ಟನ್ ಎಲ್ಲವೂ ಸುಟ್ಟು ಭಸ್ಮವಾಗಿದೆ. ರಾತ್ರಿ ವೇಳೆಯೇ ದುರಸ್ತಿಗೊಳಿಸುವ ಕಾರ್ಯ ನಡೆದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


