ಕೊಡಗಿನ ವ್ಯಕ್ತಿಗೆ ಕೊರೋನಾ ವೈರಸ್ ದೃಢ, ರಾಜ್ಯದಲ್ಲಿ 15ಕ್ಕೆ ಏರಿಕೆ: ಸಚಿವ ಶ್ರೀರಾಮುಲು
ರಾಜ್ಯದಲ್ಲಿ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ದಿನದಿಂದ ಹೆಚ್ಚಾಗುತ್ತಿದ್ದು, ಕೇರಳಕ್ಕೆ ಹೊಂದಿಕೊಂಡಿರುವ ಕೊಡಗು ಜಿಲ್ಲೆಯಲ್ಲಿ ಇಂದು ಮತ್ತೊಂದು ಪ್ರಕರಣ ದೃಢಪಟ್ಟಿದೆ. ಈ ಮೂಲಕ ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 15ಕ್ಕೆ ಏರಿಕೆಯಾಗಿದೆ.

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ದಿನದಿಂದ ಹೆಚ್ಚಾಗುತ್ತಿದ್ದು, ಕೇರಳಕ್ಕೆ ಹೊಂದಿಕೊಂಡಿರುವ ಕೊಡಗು ಜಿಲ್ಲೆಯಲ್ಲಿ ಇಂದು ಮತ್ತೊಂದು ಪ್ರಕರಣ ದೃಢಪಟ್ಟಿದೆ. ಈ ಮೂಲಕ ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 15ಕ್ಕೆ ಏರಿಕೆಯಾಗಿದೆ.
ಸೌದಿ ಅರೆಬಿಯಾದಿಂದ ಬಂದಿದ್ದ ಈ ವ್ಯಕ್ತಿಗೆ ಸೋಂಕು ತಗಲಿರುವುದು ದೃಢಪಟ್ಟಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಬಿ. ಶ್ರೀರಾಮುಲು ಟ್ವೀಟ್ ಮಾಡಿದ್ದಾರೆ. ಸೋಂಕಿತರನ್ನು ಪ್ರತ್ಯೇಕವಾಗಿ ಆಸ್ಪತ್ರೆಯಲ್ಲಿಟ್ಟು ಚಿಕಿತ್ಸೆ ಮುಂದುವರೆಸಲಾಗಿದೆ ಎಂದು ತಿಳಿಸಿದ್ದಾರೆ.
ಮಡಿಕೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಅನಿಸ್ ಕಣ್ಮಣಿ ಜಾಯ್ ಅವರು, 35 ವರ್ಷದ ವಿರಾಜಪೇಟೆಯ ವ್ಯಕ್ತಿಗೆ ಕೊರೋನಾ ವೈರಸ್ ಸೋಂಕು ತಗುಲಿದೆ. ಇವರು ದುಬೈನಿಂದ ಆಗಮಿಸಿದ್ದು, ಇವರಿಗೆ ಕೊಡಗಿನ ವೈದ್ಯಕೀಯ ಕಾಲೇಜಿನ ಐಸೊಲೇಷನ್ ವಾರ್ಡ್ ನಲ್ಲಿ ಕಳೆದ ಎರಡು ದಿನಗಳಿಂದ ಚಿಕಿತ್ಸೆ ನೀಡಲಾಗುತ್ತಿದೆ ಎಂದರು.
ಮೈಸೂರಿನ ಪ್ರಯೋಗಾಲಯದಲ್ಲಿ ಎರಡು ಹಂತಗಳಲ್ಲಿ ಪರೀಕ್ಷೆ ಮಾಡಲಾಗಿದ್ದು, ಸೋಂಕು ತಗಲಿರುವುದು ಖಚಿತವಾಗಿದೆ. ಮಾರ್ಚ್ 15 ರಂದು ಈತ ದುಬೈನಿಂದ ಬೆಂಗಳೂರಿಗೆ ವಿಮಾನದ ಮೂಲಕ ಆಗಮಿಸಿದ್ದು, ಬಳಿಕ ಮಾರ್ಚ್ 16 ರಂದು ಅವರು ರಾಜಹಂಸ ಬಸ್ ಮೂಲಕ ಮೂರ್ನಾಡುಗೆ ತೆರಳಿದ್ದಾರೆ. ಮರು ದಿನ 17 ರಂದು ಮಡಿಕೇರಿ ಆಸ್ಪತ್ರೆಗೆ ದಾಖಲಾಗಿದ್ದರು. ಅವರು ಎಲ್ಲೆಲ್ಲಿ ಪ್ರಯಾಣಮಾಡಿದ್ದರು ಅಂತಹ ಕಡೆಗಳಲ್ಲಿ ಸಹ ಪರಿಶೀಲನೆ ನಡೆಲಾಗಿದೆ. ಅವರ ಕುಟುಂಬ ಸದಸ್ಯರ ಮೇಲೂ ನಿಗಾ ವಹಿಸಲಾಗಿದೆ ಎಂದು ಹೇಳಿದರು.
ಕೊಡಗು ಜಿಲ್ಲೆಗೆ ಹೊಂದಿಕೊಂಡಿರುವ ಗಡಿ ಭಾಗದ ಚೆಕ್ ಪೋಸ್ಟ್ ಗಳಲ್ಲಿ ವ್ಯಾಪಕ ಕಣ್ಗಾವಲು ಹಾಕಲಾಗಿದ್ದು, ಯಾವುದೇ ರೀತಿಯಲ್ಲೂ ಸಮಸ್ಯೆ ಇರುವವರು ಕಣ್ಣು ತಪ್ಪಿಸಿ ಬರದಂತೆ ನೋಡಿಕೊಳ್ಳಲಾಗುತ್ತಿದೆ. ಕೊಡಗಿನ ರೆಸಾರ್ಟ್ ನಲ್ಲಿ 180ಕ್ಕೂ ಹೆಚ್ಚು ಜನ ಇದ್ದಾರೆ. ಇವರಿಗೂ ಸಹ ಅಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದರು.
ಸೋಂಕು ಹರಡುವುದನ್ನು ತಡೆಯಲು ಮುಂಜಾಗೃತ ಕ್ರಮವಾಗಿ ವಿದೇಶದಿಂದ ಬೆಂಗಳೂರಿಗೆ ಬರುತ್ತಿರುವ ಪ್ರಯಾಣಿಕರಿಗೆ 14 ದಿನಗಳ ಪ್ರತ್ಯೇಕಿಕರಣದ ಗುರುತಾಗಿ, ಬೆಂಗಳೂರಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಕೈಗಳ ಮೇಲೆ ಸ್ಟ್ಯಾಂಪಿಂಗ್ ಮಾಡಲಾಗುತ್ತಿದೆ ಎಂದು ಶ್ರೀರಾಮುಲು ಮಾಹಿತಿ ನೀಡಿದ್ದಾರೆ.
Related Article
ಕೊರೋನಾ ಎಫೆಕ್ಟ್: ಮಸೀದಿಗಳಲ್ಲಿ ಪ್ರಾರ್ಥನೆ ಅವಧಿ ಕಡಿತಕ್ಕೆ ಸೂಚನೆ
ಹೊರದೇಶದಿಂದ ಬಂದು ಮಾಹಿತಿ ನೀಡದಿದ್ದರೆ ಕಾನೂನು ಕ್ರಮ: ಡಿಸಿ ಶರತ್
ಕೋವಿಡ್-19: ಚಂಡೀಗಢ ವ್ಯಕ್ತಿಯಲ್ಲಿ ವೈರಸ್ ದೃಢ, ಸೋಂಕಿತರ ಸಂಖ್ಯೆ 170ಕ್ಕೆ ಏರಿಕೆ
ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕೊರೋನಾ ಸೋಂಕಿತೆ ಓಡಾಟ: ಸಿಬ್ಬಂದಿ, ಸಾರ್ವಜನಿಕರಲ್ಲಿ ಹೆಚ್ಚಿದ ಆತಂಕ
ಯೋಧನಲ್ಲಿ ಕೊರೋನಾ ಪಾಸಿಟಿವ್: ಎಚ್ಚೆತ್ತ ಸೇನಾಪಡೆ, ದಿನಕ್ಕೆರಡು ಬಾರಿ ಸೈನಿಕರ ಆರೋಗ್ಯ ತಪಾಸಣೆ
ಕೊರೋನಾ ಭೀತಿ: ದೆಹಲಿ ಆಸ್ಪತ್ರೆಯಲ್ಲಿ ಶಂಕಿತ ಸೋಂಕಿತ ಆತ್ಮಹತ್ಯೆಗೆ ಶರಣು!
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


