ಬಳ್ಳಾರಿ: ಟ್ರಾಕ್ಟರ್ ಪಲ್ಟಿಯಾಗಿ ನಾಲ್ಕು ಮಂದಿ ಸ್ಥಳದಲ್ಲೇ ಸಾವು
ಟ್ರಾಕ್ಟರ್ ನ ಆಕ್ಸೆಲ್ ತುಂಡಾಗಿ ಮುಂದಿನ ಎರಡು ಗಾಲಿಗಳು ಏಕಾಏಕಿ ಕಿತ್ತುಹೋದ ಪರಿಣಾಮ ಟ್ರಾಕ್ಟರ್ ಪಲ್ಟಿಯಾಗಿ ನಾಲ್ಕು ಮಂದಿ ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ಬಳ್ಳಾರಿ ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ಕಾಂತೆಬೆನ್ನೂರು ಕ್ರಾಸ್ ಬಳಿ ಗುರುವಾರ ನಡೆದಿದೆ.

ಬಳ್ಳಾರಿ: ಟ್ರಾಕ್ಟರ್ ನ ಆಕ್ಸೆಲ್ ತುಂಡಾಗಿ ಮುಂದಿನ ಎರಡು ಗಾಲಿಗಳು ಏಕಾಏಕಿ ಕಿತ್ತುಹೋದ ಪರಿಣಾಮ ಟ್ರಾಕ್ಟರ್ ಪಲ್ಟಿಯಾಗಿ ನಾಲ್ಕು ಮಂದಿ ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ಬಳ್ಳಾರಿ ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ಕಾಂತೆಬೆನ್ನೂರು ಕ್ರಾಸ್ ಬಳಿ ಗುರುವಾರ ನಡೆದಿದೆ.
ಇಂದು ದಾಸನಹಳ್ಳಿ ಗ್ರಾಮದಿಂದ ಬಿರಬ್ಬಿ ಗ್ರಾಮಕ್ಕೆ ಮದುವೆ ಕಾರ್ಯಕ್ರಮಕ್ಕೆ ಹೋಗಿ, ವಾಪಸ್ ಬರುವಾಗ ಈ ಅಪಘಾತ ಸಂಭವಿಸಿದ್ದು, ಟ್ರಾಕ್ಟರ್ ನಲ್ಲಿದ್ದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದು, ಏಳು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳುಗಳನ್ನು ಹೂವಿನಹಡಗಲಿ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಜಕ್ಕಪ್ಪನವರ್ ವೀರಣ್ಣ(35), ಅಂಗಡಿ ಗೀತ (40), ಎಸ್.ಸುನಿತಾ (30) ಹಾಗೂ ಕಾಳಮ್ಮ ಹೆಚ್ (50) ಮೃತ ದುರ್ದೈವಿಗಳು.
ಹಿರೇಹಡಗಲಿ ಪೊಲೀಸರು ಸ್ಥಳಕ್ಕೆ ಬೇಟಿ ಪರಿಸೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


