ಪ್ರತಿಪಕ್ಷಗಳ ಸಭಾತ್ಯಾಗದ ನಡುವೆ ಕರ್ನಾಟಕ ಭೂ ಸುಧಾರಣೆ ತಿದ್ದುಪಡಿ ಕಾಯ್ದೆ ಅಂಗೀಕಾರ
ಪ್ರತಿಪಕ್ಷಗಳ ಸಭಾತ್ಯಾಗದ ಮಧ್ಯೆ ಕರ್ನಾಟಕ ಭೂಸುಧಾರಣೆಗಳ ತಿದ್ದುಪಡಿ ವಿಧೇಯಕ್ಕೆ ವಿಧಾನಸಭೆಯಲ್ಲಿ ಅಂಗೀಕಾರ ದೊರೆಯಿತು

ಬೆಂಗಳೂರು: ಪ್ರತಿಪಕ್ಷಗಳ ಸಭಾತ್ಯಾಗದ ಮಧ್ಯೆ ಕರ್ನಾಟಕ ಭೂಸುಧಾರಣೆಗಳ ತಿದ್ದುಪಡಿ ವಿಧೇಯಕ್ಕೆ ವಿಧಾನಸಭೆಯಲ್ಲಿ ಅಂಗೀಕಾರ ದೊರೆಯಿತು
ವಿಧಾನಸಭೆಯಲ್ಲಿ ವಿಧೇಯಕದ ಬಗ್ಗೆ ಬೆಳಕು ಚೆಲ್ಲಿದ ಕಂದಾಯ ಸಚಿವ ಆರ್.ಅಶೋಕ್, ಏಳು ವರ್ಷಗಳ ಬಳಿಕ ಕೈಗಾರಿಕೋದ್ಯಮಿಗಳು ಆರ್ಥಿಕ ಸಂಕಷ್ಟ ಅನುಭವಿಸುತ್ತಿದ್ದರೆ ತಾವು ಖರೀಸಿದ ಭೂಮಿಯನ್ನು ಮಾರಾಟ ಮಾಡಲು ಉದ್ದೇಶಿದರೆ, ಅದೇ ಉದ್ದೇಶಕ್ಕೆ ಇತರ ಕೈಗಾರಿಕೋದ್ಯಮಿಗೆ ಮಾರಾಟ ಮಾಡುವ ತಿದ್ದುಪಡಿ ವಿಧೇಯಕ ಇದಾಗಿದೆ.
ಕೈಗಾರಿಕೆಗಳು ಏಳು ವರ್ಷವಾದ ಮೇಲೆ ಅವರಿಗೆ ನಷ್ಟವಾದರೆ, ಆಗ ಅಲ್ಲಿನ ನೌಕರರು ಅತಂತ್ರರಾಗಿರುತ್ತಾರೆ. ಹೀಗಾಗಿ ಯಾವ ಉದ್ದೇಶಕ್ಕೆ ಭೂಮಿಯನ್ನು ಬಳಸಿದ್ದಾರೆ. ಅದನ್ನು ಅದೇ ಉದ್ದೇಶಕ್ಕೆ ಬೇರೆಯವರಿಗೆ ಮಾರಾಟ ಮಾಡಲು ಅವಕಾಶ ನೀಡಲಾಗುತ್ತಿದೆ ಎಂದು ವಿವರಿಸಿದರು.
ರಾಜ್ಯಕ್ಕೆ ಬರುವ ಕೈಗಾರಿಕೋದ್ಯಮಿಗಳಿಗೆ ತೊಂದರೆ ಆಗದಂತೆ ಅದನ್ನು ಸರಳೀಕರಣಗೊಳಿದ್ದೇವೆ. ರಾಜ್ಯಕ್ಕೆ ಆಗಮಿಸುವ ಕೈಗಾರಿಕೆಗಳಿಗೆ ಉತ್ತೇಜನ ನೀಡುವ ಹಿನ್ನೆಲೆಯಲ್ಲಿ ಈ ತಿದ್ದುಪಡಿ ಕಾಯ್ದೆಯನ್ನು ತರಲಾಗಿದೆ ಎಂದು ವಿವರಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


