ಸರ್ಕಾರಕ್ಕೆ ಹೊರೆಯಾದುದರಿಂದ ಲ್ಯಾಪ್‌ಟಾಪ್ ಯೋಜನೆ ಸ್ಥಗಿತ- ಡಾ.ಸಿ.ಎನ್. ಅಶ್ವತ್ಥ ನಾರಾಯಣ
ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ಕೊಡುವ ಯೋಜನೆಯನ್ನು ಹಿಂದಿನ ಸರ್ಕಾರ ಜಾರಿಗೊಳಿಸಿದ್ದು, 2019-20ನೇ ಸಾಲಿನಲ್ಲಿ ಪ್ರಥಮ ವರ್ಷದಲ್ಲಿ ಓದುತ್ತಿದ್ದ 1.09 ಲಕ್ಷ ವಿದ್ಯಾರ್ಥಿಗಳಿಗೆ 311 ಕೋಟಿ ರೂ.ವೆಚ್ಚದಲ್ಲಿ ಲ್ಯಾಪ್‌ಟಾಪ್ ಕೊಡಲಾಗಿದೆ. ಆದರೆ ಇದರಿಂದ ಸರ್ಕಾರಕ್ಕೆ ಹೆಚ್ಚಿನ ಹೊರೆಯಾಗುತ್ತಿರುವುದರಿಂದ ಈ ಸಾಲಿನಿಂದ ಯ

ಬೆಂಗಳೂರು: ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ಕೊಡುವ ಯೋಜನೆಯನ್ನು ಹಿಂದಿನ ಸರ್ಕಾರ ಜಾರಿಗೊಳಿಸಿದ್ದು, 2019-20ನೇ ಸಾಲಿನಲ್ಲಿ ಪ್ರಥಮ ವರ್ಷದಲ್ಲಿ ಓದುತ್ತಿದ್ದ 1.09 ಲಕ್ಷ ವಿದ್ಯಾರ್ಥಿಗಳಿಗೆ 311 ಕೋಟಿ ರೂ.ವೆಚ್ಚದಲ್ಲಿ ಲ್ಯಾಪ್‌ಟಾಪ್ ಕೊಡಲಾಗಿದೆ. ಆದರೆ ಇದರಿಂದ ಸರ್ಕಾರಕ್ಕೆ ಹೆಚ್ಚಿನ ಹೊರೆಯಾಗುತ್ತಿರುವುದರಿಂದ ಈ ಸಾಲಿನಿಂದ ಯೋಜನೆಯನ್ನು ಕೈಬಿಡಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ ವಿಧಾನಸಭೆಗೆ ತಿಳಿಸಿದ್ದಾರೆ.
ಪ್ರಶ್ನೋತ್ತರ ಅವಧಿಯಲ್ಲಿ ಸದಸ್ಯರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಸರ್ಕಾರಿ ಪದವಿ ಕಾಲೇಜಿನ ಪ್ರಥಮ ವರ್ಷದ ಎಲ್ಲಾ ವಿದ್ಯಾರ್ಥಿಗಳಿಗೆ 2019-20ನೆ ಸಾಲಿನಲ್ಲಿ ಲಾಪ್‌ಟಾಪ್ ಕೊಡಲಾಗಿದೆ. ಸಿದ್ದರಾಮಯ್ಯ ಹಾಗೂ ಎಚ್.ಡಿ. ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಮಾತ್ರ ಎಂದು ನಿರ್ಧಾರವಾಗಿತ್ತು. ಹಣಕಾಸು ಇಲಾಖೆ ಕೂಡ ಇದಕ್ಕೆ ಅನುಮೋದನೆ ನೀಡಿತ್ತು. ಟೆಂಡರ್ ಮತ್ತು ವರ್ಕ್ ಆರ್ಡರ್ ಕೂಡ ಆ ಸರ್ಕಾರವೇ ಮಾಡಿತ್ತು, ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ನೀಡಿದರೆ ಮುಂದಿನ ಹಲವು ವರ್ಷಗಳವರೆಗೆ ಅವರಿಗೆ ಅನುಕೂಲವಾಗುತ್ತದೆ ಎಂಬ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳಲಾಗಿತ್ತು ಎಂದರು.
ರಾಜ್ಯದ 400 ಸರ್ಕಾರಿ ಕಾಲೇಜುಗಳಲ್ಲಿ ಮೂಲಭೂತ ಸೌಲಭ್ಯಗಳಿಲ್ಲ. ನ್ಯಾಕ್ ಅಕ್ರಡೇಷನ್ ಕೂಡ ಹಲವು ಕಾಲೇಜುಗಳಿಗೆ ಸಿಕ್ಕಿಲ್ಲ. ಮೊದಲು ಮೂಲಭೂತ ಸೌಲಭ್ಯ ಒದಗಬೇಕು ಎಂಬ ಉದ್ದೇಶದಿಂದ ಮುಂದಿನ ವರ್ಷಕ್ಕೆ ಈ ಯೋಜನೆಯನ್ನು ವಿಸ್ತರಿಸದಿರಲು ನಿರ್ಧರಿಸಲಾಗಿದೆ ಎಂದು ಹೇಳಿದರು.
ಮೊದಲು ಪಟ್ಟಿ ಮಾಡಿದ ಪ್ರಕಾರ, 2019-20ನೇ ಸಾಲಿನಲ್ಲಿ 96,483 ವಿದ್ಯಾರ್ಥಿಗಳ ಹೆಸರಿತ್ತು. ನಂತರ ಇದು 1 ಲಕ್ಷದ 9 ಸಾವಿರದ ವಿದ್ಯಾರ್ಥಿಗಳಿಗೆ ವಿಸ್ತರಿಸಲಾಗಿದೆ. ತಾಂತ್ರಿಕ ಕಾರಣಗಳಿಂದ ಹೆಸರು ಬಿಟ್ಟು ಹೋಗಿದ್ದರೆ ಅವರ ಹೆಸರನ್ನು ಸೇರಿಸುವ ಬಗ್ಗೆ ಪರಿಶೀಲಿಸಲಾಗುವುದು ಎಂದು ಅಶ್ವತ್ಥನಾರಾಯಣ ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


