ಚೌಡಯ್ಯ ಮೆಮೋರಿಯಲ್ ಹಾಲ್ ನ ಸಂಗೀತ ಕಾರ್ಯಕ್ರಮಕ್ಕೆ ಬಂದಿದ್ದ ಪ್ರೇಕ್ಷಕನಲ್ಲಿ ಕೊರೋನಾ ವೈರಸ್!
ಕಳೆದ ಮಾರ್ಚ್ 12ರಂದು ನಗರದ ಚೌಡಯ್ಯ ಮೆಮೋರಿಯಲ್ ಹಾಲ್ ನಲ್ಲಿ ಜಾನಪದ ಸಂಗೀತಗಾರ ಮಿರ್ ಮುಕ್ತಿಯಾರ್ ಅಲಿ ಅವರ ಸಂಗೀತ ಕಾರ್ಯಕ್ರಮ ವೀಕ್ಷಿಸಲು ಬಂದಿದ್ದ ಪ್ರೇಕ್ಷಕರೊಬ್ಬರಿಗೆ ಕೊರೋನಾ ಸೋಂಕು ಪತ್ತೆಯಾಗಿದೆ.

ಬೆಂಗಳೂರು:ಕಳೆದ ಮಾರ್ಚ್ 12ರಂದು ನಗರದ ಚೌಡಯ್ಯ ಮೆಮೋರಿಯಲ್ ಹಾಲ್ ನಲ್ಲಿ ಜಾನಪದ ಸಂಗೀತಗಾರ ಮಿರ್ ಮುಕ್ತಿಯಾರ್ ಅಲಿ ಅವರ ಸಂಗೀತ ಕಾರ್ಯಕ್ರಮ ವೀಕ್ಷಿಸಲು ಬಂದಿದ್ದ ಪ್ರೇಕ್ಷಕರೊಬ್ಬರಿಗೆ ಕೊರೋನಾ ಸೋಂಕು ಪತ್ತೆಯಾಗಿದೆ.
ಈ ಸಮಾರಂಭದಲ್ಲಿ ಯಾರೆಲ್ಲಾ ಬಂದಿದ್ದರು, ಎಷ್ಟು ಜನರಿದ್ದರು ಎಂಬ ಬಗ್ಗೆ ಆರೋಗ್ಯ ಇಲಾಖೆ ಇದೀಗ ಮಾಹಿತಿ ಪತ್ತೆಹಚ್ಚಲು ಹೊರಟಿದೆ.
ಈ ಕಾರ್ಯಕ್ರಮವನ್ನು ಆಯೋಜಿಸಿದ್ದು ಇಂಡಿಯಾ ಫೌಂಡೇಶನ್ ಫಾರ್ ದ ಆರ್ಟ್ಸ್(ಐಎಫ್ಎ). ಈ ಬಗ್ಗೆ ಪ್ರತಿಕ್ರಿಯಿಸಿದ ಚೌಡಯ್ಯ ಮೆಮೋರಿಯಲ್ ಹಾಲ್ ಅಧ್ಯಕ್ಷ ಸುಬ್ಬರಾಜು ಅರಸ್, ಕಳೆದ 12ರಂದು ನಡೆದ ಕಾರ್ಯಕ್ರಮ ವೀಕ್ಷಿಸಲು ಬಂದಿದ್ದ ವ್ಯಕ್ತಿಯೊಬ್ಬರಲ್ಲಿ ಮೊನ್ನೆ 18ರಂದು ಕೊರೋನಾ ವೈರಸ್ ಇರುವುದು ಪತ್ತೆಯಾಗಿದೆ ಎಂದು ನಮಗೆ ಫೌಂಡೇಶನ್ ನಿಂದ ಮೇಲ್ ಬಂದಿದೆ ಎಂದರು.
ಕರ್ನಾಟಕದಲ್ಲಿ ವರದಿಯಾಗಿರುವ 16 ಸೋಂಕಿತ ವ್ಯಕ್ತಿಗಳಲ್ಲಿ ಈ ವ್ಯಕ್ತಿ ಕೂಡ ಒಬ್ಬರಾಗಿದ್ದು ಇವರು ಅಮೆರಿಕಾದಿಂದ ಬಂದಿದ್ದರು. ಈ ಬಗ್ಗೆ ಸುಬ್ಬರಾಜು ಅರಸ್ ಬಿಬಿಎಂಪಿ ಆರೋಗ್ಯ ಕಾರ್ಯಪಡೆಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.
ಈ ಸಂಗೀತ ಕಾರ್ಯಕ್ರಮ ಮುಗಿದ ಮರುದಿನ ಅಂದರೆ ಮಾರ್ಚ್ 13ರಂದು ಸರ್ಕಾರ ಜನರು ಸಾರ್ವಜನಿಕವಾಗಿ, ಗುಂಪು-ಗುಂಪಾಗಿ ಸೇರುವುದನ್ನು ನಿರ್ಬಂಧಿಸಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


