ರಾಜ್ಯ

ಕೋವಿದ್ 19: ಮಂಗಳೂರು–ಕೇರಳ ನಡುವೆ ಮಾ 21 ರಿಂದ 31 ರವರೆಗೆ ರಸ್ತೆ ಸಂಚಾರ ಬಂದ್‍

ಕೊವಿದ್ -19 ಹರಡುವುದನ್ನು ತಡೆಯಲು ಕಟ್ಟುನಿಟ್ಟಿನ ಕ್ರಮ ಕೈಗೊಂಡಿರುವ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧು ಬಿ ರೂಪೇಶ್ ಅವರು, ಕೇರಳ ರಾಜ್ಯಕ್ಕೆ ಹಾದು ಹೋಗುವ ರಸ್ತೆ ಸಂಪರ್ಕವನ್ನು ಮಾರ್ಚ್ 21 ರಿಂದ ಮಾರ್ಚ್ 31 ರ ಮಧ್ಯರಾತ್ರಿಯವರೆಗೆ ಮುಚ್ಚಲು ಆದೇಶಿಸಿದ್ದಾರೆ.

ಕೋವಿದ್ 19: ಮಂಗಳೂರು–ಕೇರಳ ನಡುವೆ ಮಾ 21 ರಿಂದ 31 ರವರೆಗೆ ರಸ್ತೆ ಸಂಚಾರ ಬಂದ್‍
ಸಿಂಧು ಬಿ ರೂಪೇಶ್
Published On :

ಮಂಗಳೂರು: ಕೊವಿದ್ -19 ಹರಡುವುದನ್ನು ತಡೆಯಲು ಕಟ್ಟುನಿಟ್ಟಿನ ಕ್ರಮ ಕೈಗೊಂಡಿರುವ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧು ಬಿ ರೂಪೇಶ್ ಅವರು, ಕೇರಳ ರಾಜ್ಯಕ್ಕೆ ಹಾದು ಹೋಗುವ ರಸ್ತೆ ಸಂಪರ್ಕವನ್ನು ಮಾರ್ಚ್ 21 ರಿಂದ ಮಾರ್ಚ್ 31 ರ ಮಧ್ಯರಾತ್ರಿಯವರೆಗೆ ಮುಚ್ಚಲು ಆದೇಶಿಸಿದ್ದಾರೆ.

ಕೇರಳದ ಕಾಸರಗೋಡು ಮತ್ತು ದಕ್ಷಿಣ ಕನ್ನಡ ಮತ್ತು ಜಿಲ್ಲೆಯ ನಡುವೆ ಯಾವುದೇ ವಾಹನಗಳು ಸಂಚರಿಸಲು ಅನುಮತಿಸುವುದಿಲ್ಲ ಎಂದು ಜಿಲ್ಲಾಧಿಕಾರಿ ಶುಕ್ರವಾರ ತಡರಾತ್ರಿ ಆದೇಶದಲ್ಲಿ ತಿಳಿಸಿದ್ದಾರೆ.

ಯಾವುದೇ ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಮಂಗಳೂರು ನಗರದಿಂದ ಸುಮಾರು 17 ಕಿ.ಮೀ ದೂರದಲ್ಲಿರುವ ರಾಷ್ಟ್ರೀಯ ಹೆದ್ದಾರಿ 66 ರಲ್ಲಿರುವ ತಲಪಾಡಿ ಚೆಕ್ ಪೋಸ್ಟ್ ಮೂಲಕ ಮಾತ್ರ ವಾಹನಗಳ ಸಂಚಾರಕ್ಕೆ ಅನುಮತಿಸಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ. 

ಕಾಸರಗೋಡು ಜಿಲ್ಲೆಯಲ್ಲಿ ಶುಕ್ರವಾರ ಆರು ಕೊವಿದ್‍ -19 ಪ್ರಕರಣಗಳು ದೃಢಪಟ್ಟಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. 

ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿರುವ ‘ಜನತಾ ಕರ್ಫ್ಯೂ’ ಬೆಂಬಲಿಸಲು ದಕ್ಷಿಣ ಕನ್ನಡದ ಖಾಸಗಿ ಬಸ್ ಮಾಲೀಕರು ಮಾರ್ಚ್ 22 ರಂದು ಸೇವೆಯನ್ನು ನಿಲ್ಲಿಸಲು ನಿರ್ಧರಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.