ರಾಜ್ಯ

ವೈರಸ್ ಸಿಂಪಡಿಕೆ ಸುಳ್ಳು ಸುದ್ದಿ ಹರಡುವವರ ವಿರುದ್ಧ ಕ್ರಮ: ಗೃಹ ಸಚಿವ ಬಸವರಾಜ ಬೊಮ್ಮಾಯಿ

ಕೊರೊನಾ ವೈರಸ್ ತಡೆಯಲು ಔಷಧಿ ಸಿಂಪಡಿಸಲಾಗುತ್ತಿದೆ ಎಂದು ಸುಳ್ಳು ಸುದ್ದಿ ಹಬ್ಬಿಸಲಾಗುತ್ತಿದೆ. ಇಂತಹವರ ವಿರುದ್ದ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಎಚ್ಚರಿಸಿದ್ದಾರೆ.

ವೈರಸ್ ಸಿಂಪಡಿಕೆ ಸುಳ್ಳು ಸುದ್ದಿ ಹರಡುವವರ ವಿರುದ್ಧ ಕ್ರಮ: ಗೃಹ ಸಚಿವ ಬಸವರಾಜ ಬೊಮ್ಮಾಯಿ
ಬಸವರಾಜ್ ಬೊಮ್ಮಾಯಿ
Published On :

ಬೆಂಗಳೂರು: ಕೊರೊನಾ ವೈರಸ್ ತಡೆಯಲು ಔಷಧಿ ಸಿಂಪಡಿಸಲಾಗುತ್ತಿದೆ ಎಂದು ಸುಳ್ಳು ಸುದ್ದಿ ಹಬ್ಬಿಸಲಾಗುತ್ತಿದೆ. ಇಂತಹವರ ವಿರುದ್ದ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಎಚ್ಚರಿಸಿದ್ದಾರೆ.

ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುಳ್ಳು ಸುದ್ದಿ, ಜನರನ್ನು ದಿಕ್ಕು ತಪ್ಪಿಸುವ, ಭಯಭೀತಿಗೊಳಿಸುವ ಸಂದೇಶಗಳನ್ನು ಕಳುಹಿಸುವ ಸಾಮಾಜಿಕ ಜಾಲತಾಣದ ಮೇಲೂ ನಿಗಾವಹಿಸಲಾಗಿದೆ. ಜನರಲ್ಲಿ ಗೊಂದಲ ಸೃಷ್ಟಿಸುವ ಕೆಲಸ ಮಾಡಿದರೆ ನಿರ್ದಾಕ್ಷಿಣ್ಯ ಕಾನೂನು ಕ್ರಮ ಜರುಗಿಸಲಾಗುವುದು ಎಂದರು‌.

ಕೊರೊನಾ ವೈರಸ್​ನಿಂದ ಹೋಂ ಕ್ವಾರೆಂಟೇನ್​ನಲ್ಲಿರುವವರು ಹೊರಗೆ ಬಂದರೆ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದರು. ಭಾನುವಾರ ಜನತಾ ಕರ್ಫ್ಯೂ ಹಿನ್ನೆಲೆ ನಗರದೆಲ್ಲೆಡೆ ಸ್ತಬ್ಧವಾಗಿದ್ದು, ಮುಖ್ಯಮಂತ್ರಿ ಯಡಿಯೂರಪ್ಪ ಅವರ ಧವಳಗಿರಿ ನಿವಾಸಕ್ಕೆ ಸದ್ಯದ ಪರಿಸ್ಥಿತಿ ಕುರಿತು ಚರ್ಚೆ ನಡೆಸಲು ಗೃಹ ಸಚಿವ ಬಸವರಾಜ ಬೊಮ್ಮಯಿ ಭೇಟಿ ನೀಡಿ ಮುಖ್ಯಮಂತ್ರಿ ಜೊತೆಗೆ ಮಾತುಕತೆ ನಡೆಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.