ಎಸ್ಎಸ್ಎಲ್ ಸಿ ಪರೀಕ್ಷೆ ಮುಂದೂಡಿಕೆ- ಪಿ.ಯು ಕೊನೆಯ ಪರೀಕ್ಷೆ ನಾಳೆ ನಡೆಯಲಿದೆ; ಸುರೇಶ್ ಕುಮಾರ್
ಮಾರ್ಚ್ 27ರಂದು ಪ್ರಾರಂಭವಾಗಬೇಗಿದ್ದ ಎಸ್ ಎಸ್ ಎಲ್ ಸಿ ಪರೀಕ್ಷೆಗಳನ್ನು ಮುಖ್ಯಮಂತ್ರಿಗಳ ಆದೇಶದ ಮೇರೆಗೆ ಮುಂದೂಡಲಾಗಿದ್ದು, ನಾಳೆ ದ್ವಿತೀಯ ಪಿಯುಸಿ ಕೊನೆಯ ಪರೀಕ್ಷೆ ನಡೆಯಲಿದೆ ಎಂದು ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ತಿಳಿಸಿದ್ದಾರೆ.

ಬೆಂಗಳೂರು: ಮಾರ್ಚ್ 27ರಂದು ಪ್ರಾರಂಭವಾಗಬೇಗಿದ್ದ ಎಸ್ ಎಸ್ ಎಲ್ ಸಿ ಪರೀಕ್ಷೆಗಳನ್ನು ಮುಖ್ಯಮಂತ್ರಿಗಳ ಆದೇಶದ ಮೇರೆಗೆ ಮುಂದೂಡಲಾಗಿದ್ದು, ನಾಳೆ ದ್ವಿತೀಯ ಪಿಯುಸಿ ಕೊನೆಯ ಪರೀಕ್ಷೆ ನಡೆಯಲಿದೆ ಎಂದು ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ತಿಳಿಸಿದ್ದಾರೆ.
ಮಹಾಮಾರಿ ಕೊರೋನಾ ವೈರಸ್ ಎಲ್ಲೆಡೆ ಹರಡಿರುವ ಹಿನ್ನೆಲೆ ವಿದ್ಯಾರ್ಥಿಗಳ ಆರೋಗ್ಯದ ಹಿತದೃಷ್ಟಿಯಿಂದ ಹತ್ತನೇ ತರಗತಿ ಪರೀಕ್ಷೆ ಮುಂದೂಡಲಾಗಿದ್ದು, ಮುಂದಿನ ದಿನಾಂಕವನ್ನು ಏಪ್ರಿಲ್ ಮೊದಲ ವಾರದಲ್ಲಿ ಪ್ರಕಟಿಸಲಾಗುವುದು ಎಂದು ತಿಳಿಸಿದ್ದಾರೆ. ಮುಖ್ಯಮಂತ್ರಿಗಳು ಹಾಗೂ ಸಚಿವರ ಜೊತೆ ಚರ್ಚಿಸಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.
ಇಡೀ ಜಗತ್ತಿನೆಲ್ಲೆಡೆ ಸಾಂಕ್ರಾಮಿಕ ರೋಗ ಕೊರೊನಾವೈರಸ್ ಹರಡಿದ್ದು ಸಾವಿರಾರು ಜನರು ಈ ಸೋಂಕಿನಿಂದ ಅಸುನೀಗಿದ್ದಾರೆ. ನಮ್ಮ ರಾಜ್ಯದಲ್ಲಿ ಈಗಾಗಲೇ ಒಬ್ಬರು ಅಸುನೀಗಿದ್ದಾರೆ. ಹಾಗಾಗಿ ವಿದ್ಯಾರ್ಥಿಗಳ ಆರೋಗ್ಯದ ಹಿತದೃಷ್ಟಿಯಿಂದ ಎಲ್ಲಾ ಶಾಲಾ ಕಾಲೇಜುಗಳಿಗೆ ಈಗಾಗಲೇ ರಜೆ ಘೋಷಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


