ಕೊರೋನಾವೈರಸ್: ಮಾರ್ಚ್ 31ರವರೆಗೂ ಎಲ್ಲಾ ಶಿಕ್ಷಕರು ಮನೆಯಿಂದಲೇ ಕೆಲಸ
ಕೊರೋನಾ ವೈರಸ್ ಹಿನ್ನೆಲೆಯಲ್ಲಿ ಒಂದರಿಂದ ಆರನೇ ತರಗತಿವರೆಗಿನ ತರಗತಿಗಳು ರದ್ದುಗೊಂಡ ಬೆನ್ನಲ್ಲೇ , ಏಳು ಮತ್ತು 10ನೇ ತರಗತಿಯನ್ನು ಮುಂದೂಡಲಾಗಿರುವ ಸರ್ಕಾರ ಇದೀಗ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳ ಎಲ್ಲಾ ಶಿಕ್ಷಕರು ಮಾರ್ಚ್ 31ರವರೆಗೂ ಮನೆಯಿಂದಲೇ ಕೆಲಸ ಮಾಡುವಂತೆ ನಿರ್ದೇಶಿಸಿದೆ.

ಬೆಂಗಳೂರು: ಕೊರೋನಾ ವೈರಸ್ ಹಿನ್ನೆಲೆಯಲ್ಲಿ ಒಂದರಿಂದ ಆರರವರೆಗಿನ ತರಗತಿಗಳು ರದ್ದುಗೊಂಡ ಬೆನ್ನಲ್ಲೇ , ಏಳು ಮತ್ತು 10ನೇ ತರಗತಿಯನ್ನು ಮುಂದೂಡಲ್ಪಟ್ಟಿರುವ ಸರ್ಕಾರ ಇದೀಗ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳ ಎಲ್ಲಾ ಶಿಕ್ಷಕರು ಮಾರ್ಚ್ 31ರವರೆಗೂ ಮನೆಯಿಂದಲೇ ಕೆಲಸ ಮಾಡುವಂತೆ ನಿರ್ದೇಶಿಸಿದೆ.
ಎಲ್ಲಾ ಬೋಧಕ, ಬೋಧಕೇತರ ಸಿಬ್ಬಂದಿ, ಗುತ್ತಿಗೆ ಶಿಕ್ಷಕರು ಸೇರಿದಂತೆ ಸರ್ಕಾರಿ ಶಿಕ್ಷಣ ಸಂಸ್ಥೆಯಲ್ಲಿನ ಎಲ್ಲಾರಿಗೂ ಈ ಅವಧಿಯನ್ನು ಕರ್ತವ್ಯದ ದಿನವೆಂದು ಪರಿಗಣಿಸಬೇಕು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಹೊರಡಿಸಿರುವ ಆದೇಶದಲ್ಲಿ ತಿಳಿಸಲಾಗಿದೆ. ಶಿಕ್ಷಣ ಇಲಾಖೆಯ ಎಲ್ಲಾ ಉಪ ಆಯುಕ್ತರು, ಬಿಇಓ ಹಾಗೂ ಮುಖ್ಯ ಶಿಕ್ಷಕರಿಗೆ ಈ ಸುತ್ತೋಲೆಯನ್ನು ಕಳುಹಿಸಲಾಗಿದೆ,
ಅನುದಾನಿತ, ಅನುದಾನ ರಹಿತ ಮತ್ತು ಸರ್ಕಾರಿ ಪಿಯು ಕಾಲೇಜುಗಳ ಎಲ್ಲಾ ಬೋಧಕರು, ಬೋಧಕೇತರ ಸಿಬ್ಬಂದಿಗಳಿಗೂ ಮನೆಯಿಂದಲೇ ಕೆಲಸಕ್ಕೆ ಅವಕಾಶವಿರಲಿದೆ. ಪ್ರಥಮ ವರ್ಷದ ಪಿಯು ವಿದ್ಯಾರ್ಥಿಗಳ ಪರೀಕ್ಷೆಯನ್ನು ಮುಂದೂಡಲಾಗಿದ್ದು, ನೂತನ ದಿನಾಂಕವನ್ನು ಪ್ರಕಟಿಸಲಾಗುವುದು ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


