ಜನತೆ ನಿಯಮ ಪಾಲಿಸುತ್ತಿಲ್ಲ- ಬಸವರಾಜ್ ಬೊಮ್ಮಾಯಿ
ಮಹಾಮಾರಿ ಕೊರೋನಾ ಸೋಂಕಿನಿಂದ ದೇಶಾದ್ಯಂತ 8 ಮಂದಿ ಮೃತಪಟ್ಟಿದ್ದು, ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 27ಕ್ಕೆ ಏರಿಕೆ ಆಗಿದೆ. ಆದಾಗ್ಯೂ, ಜನತೆ ನಿಯಮ ಪಾಲಿಸುತ್ತಿಲ್ಲ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು: ಮಹಾಮಾರಿ ಕೊರೋನಾ ಸೋಂಕಿನಿಂದ ದೇಶಾದ್ಯಂತ 8 ಮಂದಿ ಮೃತಪಟ್ಟಿದ್ದು, ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 27ಕ್ಕೆ ಏರಿಕೆ ಆಗಿದೆ. ಆದಾಗ್ಯೂ, ಜನತೆ ನಿಯಮ ಪಾಲಿಸುತ್ತಿಲ್ಲ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಕೊರೋನಾ ಸೋಂಕು ಹರಡದಂತೆ ತಡೆಯುವ ನಿಟ್ಟಿನಲ್ಲಿ ರಾಜ್ಯಸರ್ಕಾರ ಸಾಕಷ್ಟು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದ್ದು, ಈ ಸೋಂಕು ಕಂಡುಬಂದಿರುವ 9 ಜಿಲ್ಲೆಗಳನ್ನು ಮಾಸಾಂತ್ಯದವರೆಗೂ ಲಾಕ್ ಡೌನ್ ಮಾಡಿದೆ. ಆದರೆ, ಸರ್ಕಾರ ತೆಗೆದುಕೊಂಡಿರುವ ಕ್ರಮಗಳನ್ನು ರಾಜ್ಯದ ಜನತೆ ಕಟ್ಟುನಿಟ್ಟಾಗಿ ಪಾಲನೆ ಮಾಡುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಸರ್ಕಾರದ ಆದೇಶ ಉಲ್ಲಂಘಿಸಿ ಜನತೆ ಮನೆಯಿಂದ ಹೊರಬರುತ್ತಿದ್ದು, ನಿಯಮ ಉಲ್ಲಂಘಿಸುತ್ತಿದ್ದಾರೆ.ಪೊಲೀಸರು ನಾಕಾ ಬಂದಿ ಹಾಕಬೇಕು, ಜನರು ಗುಂಪಾಗಿ ಸೇರದಂತೆ ಕ್ರಮ ಕೈಗೊಳ್ಳಬೇಕು, ಜನತೆ ಸರ್ಕಾರ ಸೂಚಿಸಿರುವ ಸಲಹೆಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


