ಇಡೀ ಕರ್ನಾಟಕ ಲಾಕ್ ಡೌನ್, ಸಿಎಂ ಬಿಎಸ್ ಯಡಿಯೂರಪ್ಪರಿಂದ ಮಹತ್ವದ ಆದೇಶ!
ರಾಜ್ಯದಲ್ಲಿ ಕೇವಲ 9 ಜಿಲ್ಲೆಗಳಲ್ಲಿ ಮಾತ್ರ ಲಾಕ್ ಡೌನ್ ಮಾಡಬೇಕೆಂದಿತ್ತು. ಆದರೆ ಇದೀಗ ಸಂಪೂರ್ಣ ಕರ್ನಾಟಕವನ್ನೇ ಲಾಕ್ ಡೌನ್ ಮಾಡಲು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಮಹತ್ವದ ಆದೇಶ ಹೊರಡಿಸಿದ್ದಾರೆ.

ಬೆಂಗಳೂರು: ರಾಜ್ಯದಲ್ಲಿ ಕೇವಲ 9 ಜಿಲ್ಲೆಗಳಲ್ಲಿ ಮಾತ್ರ ಲಾಕ್ ಡೌನ್ ಮಾಡಬೇಕೆಂದಿತ್ತು. ಆದರೆ ಇದೀಗ ಸಂಪೂರ್ಣ ಕರ್ನಾಟಕವನ್ನೇ ಲಾಕ್ ಡೌನ್ ಮಾಡಲು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಮಹತ್ವದ ಆದೇಶ ಹೊರಡಿಸಿದ್ದಾರೆ.
ಕೊರೋನಾ ವೈರಸ್ ಸೋಂಕು ನಿಯಂತ್ರಿಸುವ ನಿಟ್ಟಿನಲ್ಲಿ ಯಡಿಯೂರಪ್ಪನವರು ರಾಜ್ಯಾದ್ಯಂತ ಕರ್ಫ್ಯೂ ವಿಧಿಸಿರುವುದಾಗಿ ಟ್ವೀಟರ್ ನಲ್ಲಿ ಸ್ಪಷ್ಟಪಡಿಸಿದ್ದಾರೆ. ನಾಳೆಯಿಂದ ಮಾರ್ಚ್ 31ರವರೆಗೆ ಕರ್ನಾಟಕ ಲಾಕ್ ಡೌನ್ ಆಗಲಿದೆ.
ಬೆಂಗಳೂರು ಒಂದರಲ್ಲೇ 23 ಪ್ರಕರಣಗಳು ಪತ್ತೆಯಾಗಿದೆ. ಕಲಬುರಗಿ 3, ಮೈಸೂರು ಮತ್ತು ಚಿಕ್ಕಬಳ್ಳಾಪುರದಲ್ಲಿ 2, ಕೊಡಗು, ಧಾರವಾಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತಲಾ 1 ಪ್ರಕರಣಗಳು ದಾಖಲಾಗಿದ್ದು ಒಟ್ಟಾರೆ 33 ಪ್ರಕರಣಗಳು ದೃಢಪಟ್ಟಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


