ಸರ್ಕಾರಿ ನೌಕರರಿಗೆ ರಜೆ ಘೋಷಿಸಿದ ಯಡಿಯೂರಪ್ಪ: ಷರತ್ತುಗಳು ಅನ್ವಯ
ಕೋವಿಡ್ 19 ಹಬ್ಬುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಮಾದರಿಯಲ್ಲಿ ರಾಜ್ಯ ಸರ್ಕಾರದಲ್ಲೂ ಕ್ರಮ ಕೈಗೊಳ್ಳುವಂತೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರು ಸಲ್ಲಿಸಿದ್ದ ಮನವಿಗೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಸ್ಪಂದಿಸಿ, ರಜೆ ಮಂಜೂರು ಮಾಡಿದ್ದಾರೆ

ಬೆಂಗಳೂರು: ಕೋವಿಡ್ 19 ಹಬ್ಬುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಮಾದರಿಯಲ್ಲಿ ರಾಜ್ಯ ಸರ್ಕಾರದಲ್ಲೂ ಕ್ರಮ ಕೈಗೊಳ್ಳುವಂತೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರು ಸಲ್ಲಿಸಿದ್ದ ಮನವಿಗೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಸ್ಪಂದಿಸಿ, ರಜೆ ಮಂಜೂರು ಮಾಡಿದ್ದಾರೆ
50 ವರ್ಷ ಮೀರಿದ ಹಾಗೂ ಮಧುಮೇಹ ಉಸಿರಾಟದ ತೊಂದರೆ, ಮೂತ್ರಪಿಂಡ ಕಾಯಿಲೆ ಹಾಗೂ ಇಂಥ ಇತರೆ ಮಾರಣಾಂತಿಕ ಕಾಯಿಲೆಗಳಿಂದ ಬಳಲುತ್ತಿರುವ ಸರ್ಕಾರಿ ನೌಕರರಿಗೆ ವೇತನ ಸಹಿತ ರಾಜ್ಯ ಸರ್ಕಾರ ರಜೆ ಘೋಷಣೆ ಮಾಡಿದೆ.
ಕೋವಿಡ್19 ವೈರಾಣು ಹರಡುವಿಕೆಯನ್ನು ತಡೆಗಟ್ಟಲು ಮುಂಜಾಗ್ರತೆ ಕ್ರಮವಾಗಿ ಸಾಮಾಜಿಕ ಅಂತರವನ್ನು ಪಾಲಿಸಲು ಕರ್ನಾಟಕ ನಾಗರಿಕ ಸೇವಾ(ಕೆ.ಸಿ.ಎಸ್. ಆರ್) ನಿಯಮಗಳನ್ನು 1957ನ್ನು ಸಡಿಲಿಸಿ ರಜೆ ಮಂಜೂರು ಮಾಡಿ, ರಾಜ್ಯ ಸರ್ಕಾರ ಸೂಚನೆ ನೀಡಿದೆ.
ದಿನಾಂಕ ಏಪ್ರಿಲ್ 04ರ ವರೆಗೆ ಯಾವುದೇ ವೈದ್ಯಕೀಯ ಪ್ರಮಾಣ ಪತ್ರವನ್ನು ಹಾಜರುಪಡಿಸಿ, ಕರ್ನಾಟಕ ನಾಗರಿಕ ಸೇವಾ ನಿಯಮಗಳ 114ಅಡಿಯಲ್ಲಿ ಪರಿವರ್ತಿತ ರಜೆ ಪಡೆಯಲು ಅರ್ಹರಾಗಿರುತ್ತಾರೆ ಈ ಮೂಲಕ ಸಂಬಂಧಪಟ್ಟ ಎಲ್ಲಾ ಇಲಾಖೆಗಳ ನಿಯಂತ್ರಣಾಧಿಕಾರಿಗಳಿಗೆ ಸೂಚನೆಗಳನ್ನು ನೀಡಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


