ರಾಜ್ಯ

ವೈದ್ಯರು, ಪತ್ರಕರ್ತರು ಸೇರಿದಂತೆ ತುರ್ತು ಸಿಬ್ಬಂದಿಗೆ ಪೊಲೀಸರು ಅಡ್ಡಪಡಿಸಿದರೆ 100ಕ್ಕೆ ಕರೆ ಮಾಡಿ: ಪೊಲೀಸ್ ಆಯುಕ್ತ ಭಾಸ್ಕರ್ ರಾವ್

ಲಾಕ್ ಡೌನ್ ಹಿನ್ನೆಲೆಯಲ್ಲಿ ಒಂದು ವೇಳೆ ತುರ್ತು ಸೇವೆ ಸಲ್ಲಿಸುವ ಸಿಬ್ಬಂದಿಗೆ ಪೊಲೀಸರು ಅಡ್ಡಿಪಡಿಸಿದರೆ ದೂರವಾಣಿ ಸಂಖ್ಯೆ 100ಕ್ಕೆ ಕರೆ ಮಾಡಿ ಮಾಹಿತಿ ನೀಡಿ ಎಂದು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ತಿಳಿಸಿದ್ದಾರೆ.

ವೈದ್ಯರು, ಪತ್ರಕರ್ತರು ಸೇರಿದಂತೆ ತುರ್ತು ಸಿಬ್ಬಂದಿಗೆ ಪೊಲೀಸರು ಅಡ್ಡಪಡಿಸಿದರೆ 100ಕ್ಕೆ ಕರೆ ಮಾಡಿ: ಪೊಲೀಸ್ ಆಯುಕ್ತ ಭಾಸ್ಕರ್ ರಾವ್
ಸಾಂದರ್ಭಿಕ ಚಿತ್ರ
Published On :

ಬೆಂಗಳೂರು: ಲಾಕ್ ಡೌನ್ ಹಿನ್ನೆಲೆಯಲ್ಲಿ ಒಂದು ವೇಳೆ ತುರ್ತು ಸೇವೆ ಸಲ್ಲಿಸುವ ಸಿಬ್ಬಂದಿಗೆ ಪೊಲೀಸರು ಅಡ್ಡಿಪಡಿಸಿದರೆ ದೂರವಾಣಿ ಸಂಖ್ಯೆ 100ಕ್ಕೆ ಕರೆ ಮಾಡಿ ಮಾಹಿತಿ ನೀಡಿ ಎಂದು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಮಾತನಾಡಿದ ಅವರು, ಲಾಕ್ ಡೌನ್ ಹಿನ್ನೆಲೆಯಲ್ಲಿ ಸಾರ್ವಜನಿಕ ಸಂಚಾರಕ್ಕೆ ನಿರ್ಬಂಧಿಸಲಾಗಿದೆ. ಹೀಗಾಗಿ ತುರ್ತು ಸೇವೆ ಸಲ್ಲಿಸುವ ಸಿಬ್ಬಂದಿಗೆ ಸಂಚರಿಸಲು ಪೊಲೀಸರು ಅಡ್ಡಿಪಡಿಸುತ್ತಿರುವ ಕುರಿತು ದೂರು ಬರುತ್ತಿವೆ. ಹೀಗಾಗಿ ವೈದ್ಯರು, ಪತ್ರಕರ್ತರು ಸೇರಿದಂತೆ ತುರ್ತು ಸೇವೆ ಸಲ್ಲಿಸುವ ಸಿಬ್ಬಂದಿ ಸಂಚಾರದ ವೇಳೆ ತಮ್ಮ ಸಂಸ್ಥೆಯ ಐಡಿ ಕಾರ್ಡ್ ಇಟ್ಟುಕೊಂಡು ಓಡಾಡಬೇಕು ಎಂದು ಹೇಳಿದರು.

ಅಂತೆಯೇ ಕೆಲವರು ಸುಖಾ ಸುಮ್ಮನೆ ರಸ್ತೆ ಮೇಲೆ ಹೊರಗಡೆ ತಿರುಗಾಡುತ್ತಿದ್ದಾರೆ. ಹೀಗಾಗಿ ತುರ್ತು‌ ಪರಿಸ್ಥಿತಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದವರು ಐಡಿ ಕಾರ್ಡ್, ಕಂಪನಿಯ ಸಮವಸ್ತ್ರ ಅಥವಾ ಕೋವಿಡ್ -19 ತುರ್ತು ಸೇವೆ ಬ್ಯಾನರ್ ಹಾಕಿಕೊಂಡು ಹೊರಗಿ ಬನ್ನಿ ಎಂದು ಸಲಹೆ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.