ರಾಜ್ಯ

ಗದಗ ಜಿಲ್ಲೆ: ತಾಂಡಾಗಳು ನಿಯಂತ್ರಿತ ಪ್ರದೇಶಗಳಾಗಿ ಘೋಷಣೆ

ಕೊರೋನಾ ವೈರಸ್ ಸೋಂಕು ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಗದಗ ತಾಲೂಕಿನ ಅಡವಿ ಸೋಮಾಪುರ, ಪಾಪನಾಶಿ ತಾಂಡಾಗಳು ಹಾಗೂ ಮುಂಡರಗಿ ತಾಲೂಕಿನ ಶಿಂಗಟರಾಯನಕೇರಿ, ಡೋಣಿ ತಾಂಡಾಗಳ ಸುತ್ತಲಿನ 500 ಮೀಟರ್ ಪ್ರದೇಶವನ್ನು ಮುಂದಿನ ಆದೇಶದವರೆಗೆ ನಿಯಂತ್ರಿತ ಪ್ರದೇಶಗಳೆಂದು ಗದಗ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಘೋಷಿಸಿ ಭೌತಿಕ ನಿಬಂಧನೆಗಳನ್ನು ವಿಧಿಸಿ ಆದೇಶ ಹೊರಡಿಸಿದ್ದಾರೆ.

ಗದಗ ಜಿಲ್ಲೆ: ತಾಂಡಾಗಳು ನಿಯಂತ್ರಿತ ಪ್ರದೇಶಗಳಾಗಿ ಘೋಷಣೆ
Published On :

ಗದಗ:ಕೊರೋನಾ ವೈರಸ್ ಸೋಂಕು ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಗದಗ ತಾಲೂಕಿನ ಅಡವಿ ಸೋಮಾಪುರ, ಪಾಪನಾಶಿ ತಾಂಡಾಗಳು ಹಾಗೂ ಮುಂಡರಗಿ ತಾಲೂಕಿನ ಶಿಂಗಟರಾಯನಕೇರಿ, ಡೋಣಿ ತಾಂಡಾಗಳ ಸುತ್ತಲಿನ 500 ಮೀಟರ್ ಪ್ರದೇಶವನ್ನು ಮುಂದಿನ ಆದೇಶದವರೆಗೆ ನಿಯಂತ್ರಿತ ಪ್ರದೇಶಗಳೆಂದು ಗದಗ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಘೋಷಿಸಿ ಭೌತಿಕ ನಿಬಂಧನೆಗಳನ್ನು ವಿಧಿಸಿ ಆದೇಶ ಹೊರಡಿಸಿದ್ದಾರೆ.

ಅಡವಿಸೋಮಾಪುರ, ಪಾಪನಾಶಿ ತಾಂಡಾಗಳು ಹಾಗೂ ಮುಂಡರಗಿ ತಾಲೂಕಿನ ಶಿಂಗಟರಾಯನಕೇರಿ, ಡೋಣಿ ತಾಂಡಾಗಳಿಂದ ಜಿಲ್ಲೆಯ ಇತರೆ ಪ್ರದೇಶಗಳಿಗೆ ಅಥವಾ ಇತರೆ ಪ್ರದೇಶಗಳಿಂದ ಈ ತಾಂಡಾಗಳಿಗೆ ಕರ್ತವ್ಯ ನಿರತ ಅಧಿಕಾರಿ ಸಿಬ್ಬಂದಿ ಹೊರತುಪಡಿಸಿ ಜನರ ಪ್ರವೇಶವನ್ನು ನಿರ್ಬಂಧಿಸಿದೆ. 

ನಿಯಂತ್ರಿತ ವ್ಯಾಪ್ತಿ ಪ್ರದೇಶಗಳಲ್ಲಿ ಧಾರ್ಮಿಕ ಉರುಸು, ಜಾತ್ರೆ, ಮೆರವಣಿಗೆ, ಜನ ಗುಂಪು ಸೇರುವಿಕೆ, ಸಭೆ ಅಥವಾ ಮದುವೆ ಸಮಾರಂಭಗಳನ್ನು ಸಂಪೂರ್ಣವಾಗಿ ನಿಷೇಧಿಸಿದೆ. ಅಗತ್ಯ ವಸ್ತುಗಳ ಪೂರೈಕೆಯನ್ನು ಸಂಬಂಧಿತ ಇಲಾಖೆಗಳ ಮೂಲಕವೇ ಪಡೆಯಬೇಕು. ಖಾಸಗಿ ಮೂಲಗಳಿಗೆ ಅವಕಾಶವಿಲ್ಲ. ಈ ಪ್ರದೇಶಗಳ ಜನರು ಮನೆ ಬಿಟ್ಟು ಹೊರಗೆ ತಿರುಗುವುದನ್ನು ನಿಷೇಧಿಸಲಾಗಿದೆ. ಈ ತಾಂಡಾಗಳ ಜನರು ಗೃಹ ಸಂಪರ್ಕ ತಡೆಯೊಳಗೆ ಇರುವುದು ಕಡ್ಡಾಯವಾಗಿಸಿದೆ. ಈ ಪ್ರದೇಶಗಳ ಎಲ್ಲ ಶಾಲಾ, ಕಾಲೇಜು, ಕಚೇರಿಗಳನ್ನು ಮುಚ್ಚಲು, ಜನಗುಂಪು ಸೇರುವಿಕೆ, ವಾಹನ ಸಂಚಾರವನ್ನು(ಕರ್ತವ್ಯ ನಿರತ ವಾಹನ ಹೊರತುಪಡಿಸಿ) ನಿರ್ಬಂಧಿಸಲಾಗಿದೆ. 


 ಈ ಪ್ರದೇಶಗಳಲ್ಲಿ ಕೊರೊನಾ ಸೊಂಕು ಪತ್ತೆ ಹಚ್ಚಲು, ಇತರೆ ರೋಗಗಳು ಸೇರಿದಂತೆ ವೈದ್ಯಕೀಯ ಚಿಕಿತ್ಸೆ ನೀಡಲು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕ್ರಮವಹಿಸಬೇಕು. ಕೊರೊನಾ ಸೊಂಕು, ಪ್ರಕರಣಗಳು ಕಂಡುಬಂದಲ್ಲಿ ತೀವ್ರ ನಿಗಾ ಘಟಕದಲ್ಲಿರಿಸಿ ಚಿಕಿತ್ಸೆ ನೀಡಲು ಆರೋಗ್ಯ ಇಲಾಖೆಗೆ ಜಿಲ್ಲಾಧಿಕಾರಿಗಳ ಆದೇಶದಲ್ಲಿ ನಿರ್ದೇಶಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.