ಕೊರೋನಾ ಭೀತಿಯಿಂದ ಊರಿಗೆ ತೆರಳುತ್ತಿದ್ದವರಿಗೆ ಅಪಘಾತ: ಬಾಗಲಕೋಟೆಯಲ್ಲಿ ಮೂವರ ಸಾವು
ಬೆಳ್ಳಂಬೆಳಗ್ಗೆ ಕಾರು ಅಪಘಾತ ಸಂಭವಿಸಿ ಮೂವರರು ಸಾವನ್ನಪ್ಪಿದ್ದು, ಮೂವರು ವ್ಯಕ್ತಿಗಳು ಗಂಭೀರ ಗಾಯಗೊಂಡ ಘಟನೆ ನಡೆದಿದೆ.

ಬಾಗಲಕೋಟೆ: ಮಹಾಮಾರಿ ಕೋವಿಡ್-19 ಸೋಂಕಿನ ನಿರ್ಬಂಧದ ನಡುವೆಯೂ ತಮ್ಮ ಊರಿಗೆ ಹೊರಟಿದ್ದ ಮೂವರು ಕಾರು ಅಪಘಾತದಲ್ಲಿ ಮೃತಪಟ್ಟಿರುವ ದಾರುಣ ಘಟನೆ ಜಿಲ್ಲೆಯ ಇಳಕಲ್ ತಾಲೂಕಿನ ಹಿರೇಕೊಡಗಲಿ ಬಳಿ ಮಂಗಳವಾರ ಸಂಭವಿಸಿದೆ.
ಬೀದರ ಜಿಲ್ಲೆ ಬಾಲ್ಕಿ ತಾಲೂಕಿನ ಕಟಕಚಿಂಚೂಳಿ ಗ್ರಾಮದ ಸುವರ್ಣ (40), ಬಸವಣ್ಣೆಪ್ಪ (70) ಸವಿತಾ (20) ಮೃತ ದುರ್ದೈವಿಗಳು. ಕೊರೋನಾ ಭೀತಿ ಹಿನ್ನೆಲೆಯಲ್ಲಿ ನಗರ ಪ್ರದೇಶದಿಂದ ತಮ್ಮ ಊರಿಗೆ ತೆರಳುತ್ತಿದ್ದ ಇವರು ದಯನೀಯವಾಗಿ ಅಸುನೀಗಿದ್ದಾರೆ.
ಮೃತರೆಲ್ಲರೂ ಬೆಂಗಳೂರನಿಂದ ಇಳಕಲ್ ಮಾರ್ಗವಾಗಿ ಬೀದರಗೆ ತೆರಳುತ್ತಿದ್ದಾಗ, ಹಿರೇಕೊಡಗಲಿ ಬಳಿ ರಸ್ತೆ ತಿರುವು ಗೊತ್ತಾಗದೆ ಕಲ್ಲು ಬಂಡೆಗೆ ಕಾರು ಡಿಕ್ಕಿ ಹೊಡಿದಿದೆ. ಪರಿಣಾಮ ಆರು ಜನರು ಗಂಭೀರ ಗಾಯಗೊಂಡಿದ್ದು ಇಳಕಲ್ ಆಸ್ಪತ್ರೆಗೆ ಸಾಗಿಸುವ ವೇಳೆ ಇಬ್ಬರು ಸಾವನ್ನಪ್ಪಿದ್ದಾರೆ. ಇಳಕಲ್ ನಿಂದ ಬಾಗಲಕೋಟೆ ಆಸ್ಪತ್ರೆಗೆ ಹೋಗುವ ವೇಳೆ ಇನ್ನೊಬ್ಬರು ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಘಟನೆಯಲ್ಲಿ ಮೂರು ಜನ ಗಂಭೀರ ಗಾಯಗೊಂಡಿದ್ದು, ಘಟನೆಗೆ ಸಂಬಂಧಿಸಿದಂತೆ ಇಳಕಲ್ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


