ಆತಂಕ ಬೇಡ: ದಿನದ 24 ಗಂಟೆ ದಿನಸಿ ಅಂಗಡಿ, ಸೂಪರ್ ಮಾರ್ಕೆಟ್ ಓಪನ್ - ಡಿಜಿಪಿ
ಕೊರೋನಾ ಸೋಂಕಿನ ಕಾರಣ ರಾಜ್ಯದಲ್ಲಿ ದಿನ ಬಳಕೆಯ ಅಗತ್ಯ ವಸ್ತುಗಳಿಗೆ ಜನರು ಮುಗಿ ಬೀಳುತ್ತಿರುವುದನ್ನು ತಪ್ಪಿಸಲು ದಿನದ 24 ಗಂಟೆ ದಿನಸಿ ಅಂಗಡಿ, ಸೂಪರ್ ಮಾರ್ಕೆಟ್ ತೆರೆಯಲು ರಾಜ್ಯ ಪೊಲೀಸ್ ಮಹಾ ನಿರ್ದೇಶಕರು ಅನುಮತಿ ನೀಡಿದ್ದಾರೆ.

ಬೆಂಗಳೂರು: ಕೊರೋನಾ ಸೋಂಕಿನ ಕಾರಣ ರಾಜ್ಯದಲ್ಲಿ ದಿನ ಬಳಕೆಯ ಅಗತ್ಯ ವಸ್ತುಗಳಿಗೆ ಜನರು ಮುಗಿ ಬೀಳುತ್ತಿರುವುದನ್ನು ತಪ್ಪಿಸಲು ದಿನದ 24 ಗಂಟೆ ದಿನಸಿ ಅಂಗಡಿ, ಸೂಪರ್ ಮಾರ್ಕೆಟ್ ತೆರೆಯಲು ರಾಜ್ಯ ಪೊಲೀಸ್ ಮಹಾ ನಿರ್ದೇಶಕರು ಅನುಮತಿ ನೀಡಿದ್ದಾರೆ.
ಆದರೆ ಜನತೆ ಗುಂಪು ಸೇರದೆ ತಮಗೆ ಬೇಕಾದ ದ ವಸ್ತುಗಳನ್ನು ಖರೀದಿ ಮಾಡಬಹುದು ಎಂದು ಅವರು ಮನವಿ ಮಾಡಿಕೊಂಡಿದ್ದಾರೆ.
ಈ ಕುರಿತಂತೆ ಟ್ವಿಟ್ ಮಾಡಿರುವ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್, ದಿನದ 24 ಗಂಟೆ ದಿನಸಿ ಅಂಗಡಿ ತೆರೆಲು ಅವಕಾಶ ನೀಡಲಾಗಿದೆ. ಜನಜಂಗುಳಿ ತಪ್ಪಿಸಲು 24 ಗಂಟೆಯೂ ಓಪನ್ ಮಾಡಲು ಅನುಮತಿ ನೀಡಲಾಗಿದೆ.
ದಿನಸಿ, ಸೂಪರ್ ಮಾರ್ಕೆಟ್ ಗೆ ಅನುಮತಿ ನೀಡಲಾಗಿದೆ. ಗುಂಪು ಸೇರದಂತೆ ಪೊಲೀಸರು ಮನವಿ ಮಾಡಿದ್ದಾರೆ. ಅಲ್ಲದೇ ವೈದ್ಯಕೀಯ ನೆರೆವಿಗಾಗಿ ಯಾವುದೇ ಪಾಸ್ ಅಗತ್ಯ ಇಲ್ಲ ಎಂದು ಸ್ಪಷ್ಟ ಪಡಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


