ಓದುಗರ ಆತಂಕವನ್ನು ದೂರ ಮಾಡಿದ ಸಂಪಾದಕರು: ಸಿದ್ದರಾಮಯ್ಯ ಪ್ರಶಂಸೆ
ಕೊರೊನಾ ವೈರಸ್ ಹುಟ್ಟಿಸಿರುವ ಭೀತಿಯ ಹಿನ್ನೆಲೆಯಲ್ಲಿ ಕನ್ನಡ ಪತ್ರಿಕೆಗಳ ಸಂಪಾದಕರು ಸೇರಿ ಪತ್ರಿಕೆಗಳು ಸುರಕ್ಷಿತವಾಗಿವೆ ಎಂದು ಒಕ್ಕೊರಲಿನ ಭರವಸೆ ನೀಡಿರುವುದು ಸ್ವಾಗತಾರ್ಹ. ಈ ಮೂಲಕ ಓದುಗರ ಮನದಲ್ಲಿದ್ದ ಆತಂಕವನ್ನು ದೂರ ಮಾಡಿರುವುದಕ್ಕೆ ಅವರನ್ನು ಅಭಿನಂದಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಬೆಂಗಳೂರು: ಕೊರೊನಾ ವೈರಸ್ ಹುಟ್ಟಿಸಿರುವ ಭೀತಿಯ ಹಿನ್ನೆಲೆಯಲ್ಲಿ ಕನ್ನಡ ಪತ್ರಿಕೆಗಳ ಸಂಪಾದಕರು ಸೇರಿ ಪತ್ರಿಕೆಗಳು ಸುರಕ್ಷಿತವಾಗಿವೆ ಎಂದು ಒಕ್ಕೊರಲಿನ ಭರವಸೆ ನೀಡಿರುವುದು ಸ್ವಾಗತಾರ್ಹ. ಈ ಮೂಲಕ ಓದುಗರ ಮನದಲ್ಲಿದ್ದ ಆತಂಕವನ್ನು ದೂರ ಮಾಡಿರುವುದಕ್ಕೆ ಅವರನ್ನು ಅಭಿನಂದಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಕೊರೊನಾ ಸೋಂಕಿನ ಭಯಭೀತ ಸ್ಥಿತಿಯಲ್ಲಿ ದಿಟ್ಟತನದಿಂದ ಕೆಲಸ ಮಾಡುತ್ತಿರುವ ಮಾಧ್ಯಮ ಕ್ಷೇತ್ರದ ವರದಿಗಾರರು,ಕ್ಯಾಮೆರಾಮೆನ್‌ಗಳು ಮುದ್ರಣಾಲಯದ ಕಾರ್ಮಿಕರು,ಚಾಲಕರು,ಪತ್ರಿಕೆಯ ವಿತರಕರೆಲ್ಲರಿಗೂ ಅಭಿನಂದನೆಗಳು. ಮಾಧ್ಯಮ ಕ್ಷೇತ್ರ ಕೂಡಾ ಅಗತ್ಯ ಸೇವೆ ಎಂದು ಪರಿಗಣಿಸಿ ರಾಜ್ಯಸರ್ಕಾರ ಇವರ ಸುರಕ್ಷತೆಗೆ ಗಮನನೀಡಬೇಕು ಎಂದು ಸಿದ್ದರಾಮಯ್ಯ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


