ಬೆಂಗಳೂರು ಗ್ರಾಮಾಂತರ, ಮೈಸೂರಿನಲ್ಲಿ ಪ್ರಯಾಣ ಹಿನ್ನೆಲೆ ಇಲ್ಲದ ವ್ಯಕ್ತಿಗಳಿಗೆ ಕೊರೋನಾ ಸೋಂಕು!
ದೇಶಾದ್ಯಂತ 650 ಕ್ಕೂ ಹೆಚ್ಚಿನ ಮಂದಿಗೆ ಹರಡಿರುವ ಕೊರೋನಾ ವೈರಸ್ ಸೋಂಕು ಕರ್ನಾಟಕದಲ್ಲಿ 3 ನೇ ಹಂತಕ್ಕೆ (ಸಮುದಾಯಕ್ಕೆ ಹರಡಿರುವ) ತಲುಪಿದೆಯಾ ಎಂಬ ಶಂಕೆ ವ್ಯಕ್ತವಾಗಿದೆ.

ಬೆಂಗಳೂರು: ದೇಶಾದ್ಯಂತ 650 ಕ್ಕೂ ಹೆಚ್ಚಿನ ಮಂದಿಗೆ ಹರಡಿರುವ ಕೊರೋನಾ ವೈರಸ್ ಸೋಂಕು ಕರ್ನಾಟಕದಲ್ಲಿ ಸಮುದಾಯಕ್ಕೆ ಹರಡಿರುವ ಶಂಕೆ ವ್ಯಕ್ತವಾಗಿದೆ.
ಮಾ.26 ರಂದು ಒಂದೇ ದಿನ ರಾಜ್ಯದಲ್ಲಿ 4 ಪ್ರಕರಣಗಳು ಪತ್ತೆಯಾಗಿದೆ. ಆತಂಕಕಾರಿ ಸಂಗತಿ ಎಂದರೆ ವಿದೇಶದಿಂದ ಬಂದವರ ಸಂಪರ್ಕಕ್ಕೂ ಬಾರದ ಇಬ್ಬರು ವ್ಯಕ್ತಿಗಳಿಗೆ ಕೊರೋನಾ ಸೋಂಕು ತಗುಲಿರುವುದರ ಬಗ್ಗೆ ವರದಿಯಾಗಿದೆ.
ಯಾವುದೇ ವಿದೇಶ ಪ್ರಯಾಣ ಹಿನ್ನೆಲೆಯೂ ಇಲ್ಲದ, ಕೋವಿಡ್-19 ರೋಗಿಗಳೊಂದಿಗೂ ಸಂಪರ್ಕ ಹೊಂದಿರದ ಮೈಸೂರಿನ 35 ವರ್ಷದ ವ್ಯಕ್ತಿಗೆ ಕೊರೋನಾ ವೈರಸ್ ಸೋಂಕು ತಗುಲಿರುವುದು ದೃಢಪಟ್ಟಿದೆ.
ಮೈಸೂರು ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ಈ ಬಗ್ಗೆ ಮಾಹಿತಿ ನೀಡಿದ್ದು, ಕೋವಿಡ್-19 ರ ರೋಗಿಯನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಹೇಳಿದ್ದಾರೆ. ಕೋವಿಡ್-19 ಪೀಡಿತ ವ್ಯಕ್ತಿ ಔಷಧೀಯ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ. ಈತನೊಂದಿಗೆ ಪ್ರಾಥಮಿಕವಾಗಿ ಸಂಪರ್ಕಕ್ಕೆ ಬಂದಿದ್ದ 7 ಜನರನ್ನು ಪತ್ತೆ ಮಾಡಿರುವುದಾಗಿ ಆರೋಗ್ಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


