ಕೊವಿಡ್-19: ಬಳ್ಳಾರಿ ಜಿಲ್ಲಾಸ್ಪತ್ರೆಯ ಐಸೋಲೆಟೆಡ್ ವಾರ್ಡ್ ಗೆ ಶ್ರೀರಾಮುಲು ಭೇಟಿ
ಬಳ್ಳಾರಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಆರೋಗ್ಯ ಸಚಿವ ಶ್ರೀರಾಮುಲು ಅವರು ಕೋವಿಡ್-19 ಹರಡುವಿಕೆ ತಡೆಯಲು ಮುಂಜಾಗ್ರತಾ ಪರಿಶೀಲನಾ ಸಭೆಯನ್ನು ನಡೆಸಿದ್ದಾರೆ. ಜನಪ್ರತಿನಿಧಿಗಳು, ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

ಬಳ್ಳಾರಿ: ಬಳ್ಳಾರಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಆರೋಗ್ಯ ಸಚಿವ ಶ್ರೀರಾಮುಲು ಅವರು ಕೋವಿಡ್-19 ಹರಡುವಿಕೆ ತಡೆಯಲು ಮುಂಜಾಗ್ರತಾ ಪರಿಶೀಲನಾ ಸಭೆಯನ್ನು ನಡೆಸಿದ್ದಾರೆ. ಜನಪ್ರತಿನಿಧಿಗಳು, ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.
ಸಭೆಯ ಬಳಿಕ ಬಳ್ಳಾರಿ ಜಿಲ್ಲಾ ಆಸ್ಪತ್ರೆಯ ಕೊವಿಡ್-19 ಐಸೋಲೆಟೆಡ್ ವಾರ್ಡ್ ಗೆ ಖುದ್ದಾಗಿ ಸಚಿವರು ಭೇಟಿ ಕೊಟ್ಟು ಶಂಕಿತರಲ್ಲಿ ಭರವಸೆ ತುಂಬಿದ್ದಾರೆ.
ಶ್ರೀರಾಮುಲು ಅವರು ಸಂಪೂರ್ಣ ಸುರಕ್ಷಿತ ಮಾಸ್ಕ್, ಡ್ರೆಸ್ ಕೋಡ್ ಹಾಗೂ ಗ್ಲೌಸ್ ಧರಿಸಿ ಚಿಕಿತ್ಸೆ ಪಡೆಯುತ್ತಿರುವ ಶಂಕಿತರಲ್ಲಿ ಧೈರ್ಯ ತುಂಬಿದ್ದಾರೆ. ಯಾವುದೇ ಆತಂಕಕ್ಕೆ ಒಳಗಾಗದಂತೆ ಚಿಕಿತ್ಸೆ ಪಡೆಯುವಂತೆ ತಿಳುವಳಿಕೆ ಮೂಡಿಸಿದ್ದಾರೆ.
ಇದೇ ಸಂದರ್ಭದಲ್ಲಿ ಕೊರೋನಾ ವೈರಸ್ ಹರಡದಂತೆ ತಡೆಯಲು ರಚಿಸಲಾಗಿರುವ ಟಾಸ್ಕ್ ಫೋರ್ಸ್ ಟೀಂ ಪರಿಶೀಲನೆ ಮಾಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


